ದಿನ ಭವಿಷ್ಯ: ಇಂದು ಯಾರಿಗೆ ಶುಭ ಫಲ?
Daily Horoscope: ಇಂದು (ಗುರುವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಗುರುದೇವನ ಪೂರ್ಣಾನುಗ್ರಹದ ದಿನ.. ಎಲ್ಲ ಕಾರ್ಯಗಳಲ್ಲೂ ಜಯಭೇರಿ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಉತ್ತಮ ಲಾಭ. ಪೂರ್ವಜರಿಗೆ ಶ್ರದ್ಧಾಂಜಲಿಯ ಸಂದರ್ಭ. ಎಲ್ಲ ಬಗೆಯ ನಿರಾಶೆಗಳು ದೂರ. ಗಣೇಶ ಕವಚ, ವೇದಸಾರ ಶಿವಸ್ತೋತ್ರ, ಶನಿಮಹಾತ್ಮೆ ಓದಿ.
ವೃಷಭ:
ಉದರದ ಆರೋಗ್ಯದ ವಿಷಯದಲ್ಲಿ ಎಚ್ಚರ.. ಉದ್ಯೋಗಾನ್ವೇಷಿಗಳಿಗೆ ಶುಭಸೂಚನೆ. ಅಲ್ಪಾವಧಿ ಹೂಡಿಕೆಗಳು ಬೇಡ. ಕೃಷ್ಯುತ್ಪನ್ನಗಳಿಂದ ಸಾಮಾನ್ಯ ಲಾಭ. ಸ್ಟೇಶನರಿ, ಪುಸ್ತಕ ವ್ಯಾಪಾರಿಗಳಿಗೆ ಅನುಕೂಲ. ಸಂಕಷ್ಟನಾಶನ ಗಣೇಶ ಸ್ತೋತ್ರ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.
ಮಿಥುನ:
ವಂಚಕರ ಜಾಲದಲ್ಲಿ ಬೀಳಬೇಡಿ.. ಅಧ್ಯಾತ್ಮ ಜೀವಿಗಳಿಗೆ ದೈವಿಕ ಅನುಭವ. ಗೃಹಿಣಿಯರಿಗೆ ತಕ್ಕಮಟ್ಟಿಗೆ ಕ್ಷೇಮದ ದಿನ. ಸಜ್ಜನರ ಸಹವಾಸದಿಂದ ಆನಂದ. ಹತ್ತಿರದ ದೇವಮಂದಿರಕ್ಕೆ ಭೇಟಿ. ಗಣೇಶ ಅಷ್ಟಕ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
ಕರ್ಕಾಟಕ:
ಹಾಸಿಗೆ ಇದ್ದ ಷ್ಟು ಮಾತ್ರ ಕಾಲು ಚಾಚಿರಿ.. ಇಲೆಕ್ಟ್ರಾನಿಕ್ಸ್ ಕೆಲಸಗಾರರಿಗೆ ಅನುಕೂಲ. ಕುಟುಂಬದ ಮನೆಯಲ್ಲಿ ಪಿತೃಕಾರ್ಯ. ಕೇಡರಿಂಗ್ ವ್ಯವಹಾರಸ್ಥರಿಗೆ ಅನುಕೂಲ. ತೋಟಗಾರಿಕೆ, ಜೇನು ವ್ಯವಸಾಯ ಹವ್ಯಾಸಕ್ಕೆ ಉತ್ತೇಜನ. ಸಂಕಷ್ಟನಾಶನ ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
ಸಿಂಹ:
ಒಳ್ಳೆಯ ಕೆಲಸ ಮಾಡಿದರೆ ಎಂದೂ ಸೋಲು ಬಾರದು.. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಆಸ್ತಿ .ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಸರ್ಕಾರಿ ನೌಕರರಿಗೆ ರಾಜಕಾರಣಿಗಳ ಕಾಟ. ದೂರ ಪ್ರಯಾಣದಲ್ಲಿ ಜಾಗ್ರತೆ ಇರಲಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕನ್ಯಾ:
ಮುಜುಗರಕ್ಕೆ ಗುರಿಯಾಗುವ ಸಂದರ್ಭದಿಂದ ಪಾರು.. ಹೊಲಿಗೆ, ಕಸೂತಿ ಬಲ್ಲವರಿಗೆ ಅದೃಷ್ಟದ ದಿನ. ಬಂಧುಗಳ ಮನೆಯ ಪಿತೃಕಾರ್ಯದಲ್ಲಿ ಭಾಗಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ತೋಟಗಾರಿಕೆ ಬೆಳೆಗಳಿಂದ ಲಾಭ. ಗಣೇಶ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಪೀಡಾಪರಿಹಾರ ಸ್ತೋತ ಓದಿ.
ತುಲಾ:
ಅನ್ಯಾಯ ಮಾಡಿದವರ ವೈಭವ ತಾತ್ಕಾಲಿಕ.. ಕೆಲವು ವರ್ಗದ ವ್ಯಾಪಾರಿಗಳಿಗೆ ಹೆಚ್ಚು ಅನುಕೂಲ. ಲಲಿತಕಲೆಗಳಲ್ಲಿ ಪರಿಶ್ರಮ ಉಳ್ಳವರಿಗೆ ಸಂತೃಪ್ತಿ. ಸಾಮೂಹಿಕ ಪ್ರಾರ್ಥನೆಯಿಂದ ಸಮಾಜಕ್ಕೆ ಒಳಿತು. ಕಟ್ಟಡ ಸಾಮಗ್ರಿ ವ್ಯಾಪಾರದಲ್ಲಿ ಲಾಭ.ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ವೃಶ್ಚಿಕ:
ಉದ್ಯೋಗ, ಉದ್ಯಮಗಳಲ್ಲಿ ಮುನ್ನಡೆ.. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಆದಾಯ ವೃದ್ಧಿ. ದೂರದಲ್ಲಿರುವ ಬಂಧುಗಳ ಆಗಮನ. ಕೈಮಗ್ಗದ ಕೆಲಸ ಬಲ್ಲವರಿಗೆ ಅವಕಾಶ. ಕೇಟರಿಂಗ್ ವ್ಯವಹಾರಸ್ಥರ ಸಮಸ್ಯೆಗೆ ಪರಿಹಾರ. ಗಣೇಶ ದ್ವಾದಶನಾಮ ಸ್ತೋತ್ರ ,ಶಿವನಾಮಾವಲ್ಯಷ್ಟಕ, ರಾಮರಕ್ಷಾ ಸ್ತೋತ್ರ ಓದಿ.
ಧನು:
ನೆಲ, ಜಲ ಸಂರಕ್ಷಣೆಯ ಕಾರ್ಯಗಳಲ್ಲಿ ಭಾಗಿ.. ಸಹೋದ್ಯೋಗಿ ಮಿತ್ರರಿಗೆ ಮಾರ್ಗದರ್ಶನ. ಸಣ್ಣ ಹೂಡಿಕೆಗಳಲ್ಲಿ ಸಾಮಾನ್ಯ ಲಾಛ
ಶಿಕ್ಷಕ ವರ್ಗದ ಹಿತರಕ್ಷಣೆಗೆ ಪ್ರಯತ್ನ. ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ. ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಆದಿತ್ಯ ಹೃದಯ ಓದಿ.
ಮಕರ:
ಸುಲಭ ಔಷಧಿ ಸೇವಿಸಿ ಚೇತರಿಕೆ.. ಗೃಹ ಸಾಮಗ್ರಿ ವಿತರಕರಿಗೆ ಪೂರೈಕೆ ಒತ್ತಡ. ಹಿರಿಯರ ಸ್ಮರಣೆಯಲ್ಲಿ ಭಾಗಿ. ನಷ್ಟವಿಲ್ಲದ ಪರೋಪಕಾರ ಮಾಡುವ ಅವಕಾಶ. ದುರ್ಬೋಧನೆಗಳನ್ನು ನಿರ್ಲಕ್ಷಿಸಿರಿ. ಗಣೇಶ ಸ್ತೋತ್ರ, ಶಿವ ಪಂಚಾಕ್ಷರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕುಂಭ:
ಹೊಸ ಆದಾಯ ಮೂಲಗಳು ಪತ್ತೆ.. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಮಗ್ನತೆ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅನುಕೂಲದ ದಿನ. ಯುವಜನರ ಪಾಲುಗೊಳ್ಳುವಿಕೆಯಲ್ಲಿ ಶ್ರಮದಾನ. ಇಷ್ಟದೇವರ ದರ್ಶನದಿಂದ ಶುಭ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
ಮೀನ:
ಉದ್ಯೋಗ, ವ್ಯವಹಾರಗಳಲ್ಲಿ ಅನುಕೂಲ.. ಬಂಧುವರ್ಗದ ಮನೆಯ ಪಿತೃಕಾರ್ಯದಲ್ಲಿ ಭಾಗಿ. ಹಿರಿಯರಿಗೆ ಪ್ರಾಚೀನ ಪದ್ಧತಿಯಿಂದ ಆರೋಗ್ಯ. ಬಂಗಾರದ ಕೆಲಸ ಬಲ್ಲವರಿಗೆ ಸದವಕಾಶ. ತಿಂಡಿ, ತಿನಿಸು ವ್ಯಾಪಾರಿಗಳಿಗೆ ಅನುಕೂಲದ ದಿನ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.