ದಿನ ಭವಿಷ್ಯ: ಇವತ್ತು ಯಾರಿಗೆ ಶುಭ?
Daily Horoscope: ಇಂದು (ಸೋಮವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಸಂಪೂರ್ಣ ಸಾಮರ್ಥ್ಯ ಪ್ರಕಟ.. ಉದ್ಯೋಗ ಸ್ಥಾನದಲ್ಲಿ ಎಲ್ಲರ ಸಹಕಾರ. ಹೊಸ ಸಪ್ತಾಹದ ಹೂಡಿಕೆಗಳಲ್ಲಿ ಲಾಭದ ಸೂಚನೆ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಪಿತೃಗಳ ಆಶೀರ್ವಾದ ಪ್ರಾಪ್ತಿ. ಗಣೇಶ ಅಷ್ಟಕ, ದಾರಿದ್ರ್ಯದಹನ, ಶಿವಸ್ತೋತ್ರ, ಶನಿಮಹಾತ್ಮೆ ಓದಿ.
ವೃಷಭ:
ಉದ್ಯೋಗಸ್ಥರಿಗೆ ಮತ್ತು ವ್ಯವಹಾರಸ್ಥರಿಗೆ ಶುಭದಾಯಕ ಸೋಮವಾರ.. ಖಾದಿ ಉಡುಪು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶ್ರಮಿಕ ವರ್ಗಕ್ಕೆ ಅನುಕೂಲವಾದ ವಾತಾವರಣ. ವಿದ್ಯಾರ್ಥಿಗಳ ಅಧ್ಯಯನಾಸಕ್ತಿ ವೃದ್ಧಿ. ಕೇಟರಿಂಗ್ ವ್ಯವಹಾರಸ್ಥರಿಗೆ ಉತ್ತಮ ಲಾಭ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
ಮಿಥುನ:
ಹೊಂದಿಕೊಂಡು ಬಾಳುವವರಿಗೆ ಒಳ್ಳೆಯ ದಿನ.. ಮಾತಿನಲ್ಲಿ .ತಪ್ಪದಂತೆ ಎಚ್ಚರಿಕೆ ಇರಲಿ. ಹಿತಶತ್ರುಗಳ ವಿಷಯದಲ್ಲಿ ಎಚ್ಚರ ಇರಲಿ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಆಪ್ತರ ಮನೆಯ ಪಿತೃಕಾರ್ಯದಲ್ಲಿ ಭಾಗಿ. ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಶನಿಸ್ತೋತ್ರ ಓದಿ.
ಕರ್ಕಾಟಕ:
ಒಂದೇ ಬಾರಿಗೆ ದೊಡ್ಡ ಹೆಜ್ಜೆ ಇಡಬೇಡಿ.. ಉದ್ಯೋಗಸ್ಥರ ಆರ್ಥಿಕ ತೊಂದರೆ ಪರಿಹಾರ. ಉದ್ಯಮಗಳಿಗೆ ಸುಲಭವಾಗಿ ನೆರವು. ಸತ್ಪುರುಷರ ಹೆಸರು ಕೆಡಿಸುವ ಯತ್ನ ಬಯಲು. ಮಹಿಳಾ ಉದ್ಯಮಿಗಳ ಮುನ್ನಡೆ. ಗಣೇಶ ದ್ವಾದಶನಾಮ ಸ್ತೋತ್ರ, ಹನುಮಾನ್ ಕವಚ, ಮಹಿಷಮರ್ದಿನಿ ಸ್ತೋತ್ರ ಓದಿ.
ಸಿಂಹ:
ದುರ್ಜನರನ್ನು ದೂರವಿಟ್ಟಷ್ಟು ಕ್ಷೇಮ.. ಹಲವು ವ್ಯವಹಾರಗಳತ್ತ ಗಮನ ಕೊಡಲು ಒತ್ತಡ. ಉದ್ಯಮದ ಸ್ವರೂಪ ಬದಲಾವಣೆಯ ಪ್ರಕ್ರಿಯೆಗೆ ಚಾಲನೆ. ಸಿವಿಲ್ ಎಂಜಿನಿಯರರಿಗೆ ಅನುಕೂಲದ ದಿನ. ಪಿತೃಕಾರ್ಯದಲ್ಲಿ ಭಾಗವಹಿಸಿ ಧನ್ಯತಾ ಭಾವ. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಕನ್ಯಾ:
ಕಾರ್ಯಕ್ಷೇತ್ರದಲ್ಲಿ ಎಲ್ಲರ ಸಹಕಾರ.. ಪ್ರತಿಭೆ ಹಾಗೂ ಕಾರ್ಯನಿಷ್ಠೆಗೆ ಎಲ್ಲರ ಮೆಚ್ಚುಗೆ. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆಯ ಭರವಸೆ. ದೂರದೂರಿಗೆ ಪ್ರಯಾಣ ಮುಂದಕ್ಕೆ.ಕುಟುಂಬಸ್ಥರ ಪಿತೃಕಾರ್ಯದಲ್ಲಿ ಭಾಗಿ. ಗಣೇಶ ದ್ವಾದಶನಾಮ ಸ್ತೋತ್ರ, ಆದಿತ್ಯ ಹೃದಯ, ಕಾರ್ತಿಕೇಯ ಸ್ತೋತ್ರ ಓದಿ.
ತುಲಾ:
ಸ್ವಾರ್ಥ ಮನೋವೃತ್ತಿಯವರಿಗೆ ಮುಖಭಂಗ.. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸಕಾಲಿಕ ನೆರವು. ಲೇವಾದೇವಿ ವ್ಯವಹಾರ ಬೇಡ. ಸಂಸಾರದಲ್ಲಿ ಸಾಮರಸ್ಯ ವೃದ್ಧಿಗೆ ಸಹಕಾರ. ಹಿರಿಯರ ಆಸ್ತಿ ಜೋಪಾನಕ್ಕೆ ಕ್ರಮ. ಸಂಕಷ್ಟನಾಶನ ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ವೃಶ್ಚಿಕ:
ವಿವಿಧ ಬಗೆಯ ವೃತ್ತಿಗಳವರಿಗೆ ಹಿತಾನುಭವ.. ಉದ್ಯೋಗಸ್ಥರ ಸ್ಥಾನ ಗೌರವ ವೃದ್ಧಿ. ಸರ್ಕಾರಿ ಅಧಿಕಾರಿಗಳಿಗೆ ಪುಢಾರಿಗಳ ಕಾಟ. ಉನ್ನತ ರಾಜಕಾರಣಿಗಳಿಗೆ ಅಧಿಕಾರ ದಾಹ. ದಾಯಾದಿಗಳ ಮನೆಯ ಪಿತೃಕಾರ್ಯದಲ್ಲಿ ಭಾಗಿ. ಗಣೇಶ ಪಂಚರತ್ನ, ವಿಷ್ಣು ಸಹಸ್ರನಾಮ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಧನು:
ಪ್ರತಿಭೆ ,ಕೌಶಲಗಳಿಂದ ಕಾರ್ಯದಲ್ಲಿ ವಿಜಯ.. ಉದ್ಯೋಗ ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಅಲಭ್ಯ. ಬಂಧುಗಳ ಮನೆಯಲ್ಲಿ ಪಿತೃಕಾರ್ಯ. ಗಣೇಶ ತ್ರಿಶತಿ ಸ್ತೋತ್ರ, ರಾಮ ಭುಜಂಗಪ್ರಯಾತ ಸ್ತೋತ್ರ, ಹನುಮಾಮ್ ಚಾಲೀಸಾ ಓದಿ.
ಮಕರ:
ಸಂದಿಗ್ಧ ಪರಿಸ್ಥಿತಿಗಳಿಂದ ಪಾರು.. ವೃತ್ತಿಪರ ಉದ್ಯೋಗಸ್ಥರಿಗೆ ಸಮಯದೊಂದಿಗೆ ಸೆಣಸಾಟ. ಬಂಧುವರ್ಗದಲ್ಲಿ ಸಾಮರಸ್ಯ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.ಮಕ್ಕಳನ್ನು ಸಾಕುಪ್ರಾಣಿಗಳಿಂದ ದೂರವಿಡಿ. ಗಣೇಶ ಅಷ್ಡೋತ್ತರ ಶತನಾಮ ಸ್ತೋತ್ರ, ಶಿಬಚಾಕ್ಷರ ಸ್ತೋತ್ರ, ಹನುಮಾಮ್ ಚಾಲೀಸಾ ಓದಿ.
ಕುಂಭ.
ಗತ ಸಪ್ತಾಹದ ಕಾರ್ಯಗಳ ಮುಂದುವರಿಕೆ. ಸರ್ಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿಗಳು..ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತೃಪ್ತಿಯ ಅನುಭವ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ. ಗಣೇಶ ಅಷ್ಟಕ, ದತ್ತಪಂಜರ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಹಿರಿಯ ಅಧಿಕಾರಿಗಳಿಂದ ಸರ್ವವಿಧ ಸಹಾಯ.. ಎಲ್ಲ ಬಗೆಯ ಸೇವೆಗಳಿಗೆ ಗೌರವ. ಸ್ವಂತ ಉದ್ಯಮ ಕ್ರಮೇಣ ಮುನ್ನಡೆ. ಮಕ್ಕಳ ಅಧ್ಯಯನಾಸಕ್ತಿಯ ಕಡೆಗೆ ಗಮನ ಇರಲಿ. ಕುಡುಂಬದ ಪಿತೃಕಾರ್ಯದಲ್ಲಿ ಭಾಗಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.