ದಿನ ಭವಿಷ್ಯ: ಇವತ್ತು ಯಾರಿಗೆ ಶುಭ?

Daily Horoscope: ಇಂದು (ಶುಕ್ರವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Oct 16, 2026 - 10:15
ದಿನ ಭವಿಷ್ಯ: ಇವತ್ತು ಯಾರಿಗೆ ಶುಭ?

ಮೇಷ:

ಎಲ್ಲಾ ವ್ಯವಹಾರಗಳಿಗೆ  ಅನುಕೂಲ.. ಎಳೆಯರು ವಾಹನ ಚಾಲನೆಯಲ್ಲಿ ಎಚ್ಚರ. ಪ್ರಕೃತಿಯ ಜೊತೆಯಲ್ಲಿ ಸಾಮರಸ್ಯದಿಂದ ಆನಂದ. ಮಹಾಪುರುಷರ ದರ್ಶನಯೋಗ. ನವರಾತ್ರಿಯ ಸಂಭ್ರಮದಲ್ಲಿ ಭಾಗಿ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.

ವೃಷಭ:

ಸಾಂಸಾರಿಕ- ಸಾಮಾಜಿಕ ಜೀವನದಲ್ಲಿ ಸಮತೋಲನ.. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ಗೌರವ. ಗೃಹೋದ್ಯಮದ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ. ವೃತ್ತಿಪರರಿಗೆ ಸಮಯದ ಸವಾಲು. ದೇವಿಯ ಆಲಯಕ್ಕೆ ಭೇಟಿ. ಗಣೇಶ ಕಬಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಗುರುಸ್ತೋತ್ರ ಓದಿ.

ಮಿಥುನ:

ಸರಿಯಾದ ಸಮಯದಲ್ಲಿ ಸ್ಪಂದಿಸಿರಿ.. ಉದ್ಯಮಿಗಳ ಪಾಲಿಗೆ ಒಳ್ಳೆಯ ದಿನ ಅಕಸ್ಮಾತ್ ಧನಲಾಭ ಸಂಭವ. ಎಳೆಯರ ಮನೋವಿಕಾಸಕ್ಕೆ ಸೂಕ್ತ ಪ್ರಯತ್ನ. ದಂಪತಿಗಳ ನಡುವೆ ಹೊಂದಾಣಿಕೆ ಇರಲಿ. ಗಣೇಶ ಅಷ್ಟಕ, ಬಿಲ್ವಾಷ್ಟಕ, ಮಹಿಷಮರ್ದಿನಿ ಸ್ತೋತ್ರ ಓದಿ.

ಕರ್ಕಾಟಕ:

ಊರಿನಲ್ಲಿ ಹಬ್ಬದ ವಾತಾವರಣ.. ಉದ್ಯೋಗ ಸ್ಥಾನದಲ್ಲಿ ಸೌಹಾರ್ದ ವಾತಾವರಣ. ಖಾದಿ ಉದ್ಯಮ ಬೆಳೆಸಲು ಆಸಕ್ತಿ. ತಾಯಿಯ ಆರೋಗ್ಯ ಗಮನಿಸಿ. ಭಜನೆ, ಹರಿಕಥೆ, ಸತ್ಸಂಗಗಳ ಕಡೆಗೆ ಸೆಳೆತ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಭುಗ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

ಸಿಂಹ:

ಉದ್ಯೋಗ ಸ್ಥಾನದಲ್ಲಿ ಅಪಾರ ಉತ್ಸಾಹ.. ವಸ್ತ್ರ, ಆಭರಣಾದಿ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ವ್ಯಾಪಾರ. ದ್ವಿಚಕ್ರ ವಾಹನ ದುರಸ್ತಿಗಾರರಿಗೆ ಅಧಿಕ ಲಾಭ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ ಸ್ನೇಹಿತನ ಮಗನ ವಿವಾಹ ನಿಶ್ಚಿತಾರ್ಥದಲ್ಲಿ ಭಾಗಿ. ಗಣೇಶ ಕವಚ, ದತ್ತಪಂಜರ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.

ಕನ್ಯಾ:

ಏನಾದರೂ ಸಾಧಿಸಬೇಕೆಂಬ ಹಂಬಲ ಈಡೇರಿಕೆ.. ಕೃಷಿ ಆಧಾರಿತ ಉದ್ಯಮಗಳಿಗೆ ಅನುಕೂಲದ ದಿನ. ಗೃಹೋಪಕರಣ ಖರೀದಿಗೆ ಧನವ್ಯಯ. ಹೊಲಿಗೆ ಕೆಲಸ ಬಲ್ಲವರಿಗೆ ಉದ್ಯೋಗಾವಕಾಶ. ಸಾಮೂಹಿಕ ಸ್ತೋತ್ರಪಠನದಲ್ಲಿ ಭಾಗಿ. ಗಣೇಶ ದ್ವಾದಶನಾಮ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.

ತುಲಾ:

ನಾಜೂಕುತನದ ವ್ಯವಹಾರದಿಂದ ವಿಜಯ.. ಕಸೂತಿ, ಕರಕೌಶಲದ ಕೆಲಸಗಳನ್ನು ಬಲ್ಲವರಿಗೆ ಬೇಡಿಕೆ. ಮಕ್ಕಳ ಬಹುಮುಖ ಪ್ರತಿಭೆ ಬೆಳವಣಿಗೆಗೆ ಪ್ರೋತ್ಸಾಹ. ಇಷ್ಟದೇವರ ದರ್ಶನದಿಂದ  ಹರ್ಷ. ಮನೋಬಲ ವೃದ್ಧಿಗೆ ಸಾಧನೆ. ಗಣೇಶ ಕವಚ, ನರಸಿಂಹ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.

ವೃಶ್ಚಿಕ:

ಉದ್ಯೋಗ ಮುಂದುವರಿಸಲು ಪ್ರೋತ್ಸಾಹ.. ಒಂದಿಲ್ಲೊಂದು ಬಗೆಯ ಹವ್ಯಾಸ ಬೆಳೆಸಿಕೊಳ್ಳುವ ಪ್ರಯತ್ನ. ಗೃಹೋದ್ಯಮ ಉತ್ಪನ್ನಗಳಿಗೆ ಹೊಸ ಗಿರಾಕಿಗಳು. ಉದ್ಯೋಗ ಅರಸುವ ಶಿಕ್ಷಿತರಿಗೆ ಮಾರ್ಗದರ್ಶನ. ಹತ್ತಿರದ ದೇವಿ ಆಲಯ ಸಂದರ್ಶನ. ಸಂಕಷ್ಟನಾಶನ ಗಣೇಶ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ಧನು:

ಸೇವಾಕಾರ್ಯಗಳಲ್ಲಿ ಕಾಲಯಾಪನೆ.. ಉದ್ಯೋಗಸ್ಥರ ನಡುವೆ ಪರಸ್ಪರ ಸಹಕಾರ. ಸಣ್ಣ ಗೃಹೋದ್ಯಮಗಳಿಗೆ ಶುಕ್ರದೆಶೆ. ಉದ್ಯೋಗಾಸಕ್ತರಿಗೆ ಯೋಗ್ಯ ಅವಕಾಶ. ದೇವಾಲಯ ದರ್ಶನದಿಂದ ನೆಮ್ಮದಿ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.

ಮಕರ:

ಮಾತೃ ಸಮಾನ ವ್ಯಕ್ತಿಯಂದ .ಮಾರ್ಗದರ್ಶನ.. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಮಕ್ಕಳ ಜ್ಞಾನವೃದ್ಧಿಗೆ ವಿಶೇಷ ಪ್ರಯತ್ನ.ಅಸಹಾಯಕರಿಗೆ ನೆರವಾಗುವ ಅವಕಾಶ. ಬಂಧುಗಳೊಂದಿಗೆ ಸಂತೋಷ ಕೂಟದ ಸಾಧ್ಯತೆ. ಗಣೇಶ ಕವಚ, ದತ್ತಪಂಜರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕುಂಭ:

ಪಾಲುದಾರಿಕೆ  ವ್ಯವಹಾರದಲ್ಲಿ ಅನುಕೂಲ.. ಉದ್ಯೋಗಸ್ಥರಿಗೆ ಸತ್ವಪರೀಕ್ಷೆಯಲ್ಲಿ ಜಯ. ವೃತ್ತಿರಂಗದ ಮಿತ್ರರಿಗೆ ಸಹಾಯ. ಗ್ರಾಹಕರ ವಿಶ್ವಾಸ ಉಳಿಸುವ ಪ್ರಯತ್ನ. ಅವಿವಾಹಿತ ಹುಡುಗರಿಗೆ ವಿವಾಹ ಯೋಗ. ಗಣೇಶ ಅಷ್ಟಕ, ವೆಂಕಟೇಶ್ವರ ಸ್ತೋತ್ರ, ಶನಿಮಹಾತ್ಮೆ ಓದಿ.

ಮೀನ:

ಕೊಂಚ ಸಡಿಲಾದ ಕೆಲಸಗಳ ಒತ್ತಡ.. ಭೂಮಿ  ವ್ಯವಹಾರ ಮುಂದುವರಿಕೆ. ಗುರುಸಮಾನ ವ್ಯಕ್ತಿಯ ಆಗಮನ. ವ್ಯವಹಾರ ಸಂಬಂಧ ಪ್ರಯಾಣದ ಸಾಧ್ಯತೆ. ಊರಿನ ದೇವಾಲಯದ ಸಂಭ್ರಮದಲ್ಲಿ ಭಾಗಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.