ದಿನ ಭವಿಷ್ಯ: ಇವತ್ತು ಯಾರಿಗೆ ಶುಭ?
Daily Horoscope: ಇಂದು (ಮಂಗಳವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ನಿಮ್ಮ ಪ್ರಗತಿಗೆ ಯಾವುದೇ ತಡೆ ಇಲ್ಲ.. ಉದ್ಯೋಗ ಸ್ಥಾನದಲ್ಲಿ ಸರ್ವರಿಂದ ಶ್ಲಾಘನೆ. ಹೊಸ ಹೂಡಿಕೆಗಳಲ್ಲಿ ಲಾಭದ ಸೂಚನೆ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಸಚ್ಚಾರಿತ್ರ್ಯ ಮೆರೆದ ನಾಯಕರಿಗೆ ವಿಜಯ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
ವೃಷಭ:
ಅಸಾಮಾನ್ಯ ಫಲಪ್ರದವಾದ ಮಂಗಳವಾರ.. ಖಾದಿ ಉಡುಪು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶ್ರಮಿಕ ವರ್ಗಕ್ಕೆ ಅನುಕೂಲವಾದ ವಾತಾವರಣ. ಕೇಟರಿಂಗ್ ವ್ಯವಹಾರಸ್ಥರಿಗೆ ಉತ್ತಮ ಲಾಭ. ವಿದ್ಯಾರ್ಥಿಗಳಿಗೆ ರಜೆಯ ಸಂಭ್ರಮ.ಗಣೇಶ ಕವಚ, ಋಣಮೋಚನ ಮಂಗಳ ಸ್ತೋತ್ರ ಲಕ್ಷ್ಮೀಸ್ತೋತ್ರ ಓದಿ.
ಮಿಥುನ:
ದಂಪತಿಗಳ ನಡುವೆ ಅನುರಾಗ ವೃದ್ಧಿ.. ದೂರ ಪ್ರಯಾಣ ಮಾಡುವುದು ಬೇಡ. ಕೇವಲ ಮಾತು ಕೇಳಿ ನಂಬಬೇಡಿ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ರಾಷ್ಟ್ರಸೇವೆ ಸಲ್ಲಿಸಿದವರಿಗೆ ಸಾರ್ಥಕ ಭಾವ. ಗಣೇಶ ಪಂಚರತ್ನ, ದಕ್ಷಿಣಾಮೂರ್ತಿ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಕರ್ಕಾಟಕ:
ಸ್ಥಿರವಾದ ಹೆಜ್ಹೆಗಳನ್ನಿಟ್ಟು ಮುನ್ನಡೆಯಿರಿ.. ಉದ್ಯೋಗಸ್ಥರಲ್ಲಿ ಹಲವರಿಗೆ ನಿರಾಳ ಭಾವ. ಉದ್ಯಮಗಳಿಗೆ ಅನಾಯಾಸವಾಗಿ ನೆರವು. ಮಹಿಳಾ ಉದ್ಯಮಿಗಳ ಆರ್ಥಿಕ ಬಲ ವೃದ್ಧಿ. ಹಿರಿಯರಿಗೆ ಮನೋಬಲದಿಂದ ಆರೋಗ್ಯ ಪ್ರಾಪ್ತಿ. ಸಂಕಷ್ಟನಾಶನ ಗಣೇಶ ಸ್ತೋತ್ರ, ನರಸಿಂಹ ಕವಚ, ಮಹಾಲಕ್ಷ್ಮಿ ಅಷ್ಟಕ ಓದಿ.
ಸಿಂಹ:
ಯಾರನ್ನೂ ಒಂದೇ ಬಾರಿಗೆ ವಿಶ್ವಾಸಕ್ಕೆ ತೆಗೆದುಕೊಳಬೇಡಿ.. ಹಲವು ವ್ಯವಹಾರಗಳತ್ತ ಗಮನ ಕೊಡಲು ಒತ್ತಡ. ಉದ್ಯೋಗಸ್ಥರಿಗೆ ಅರಸದೆ ಬರುವ ಅವಕಾಶಗಳು. ಸಿವಿಲ್ ಎಂಜಿನಿಯರರಿಗೆ ಅನುಕೂಲದ ದಿನ. ಕುಟುಂಬದೊಳಗೆ ಸಾಮರಸ್ಯ ಸ್ಥಾಪನೆ. ಗಣೇಶ ತ್ರಿಶತಿ ಸ್ತೋತ್ರ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ದೇವೀಸ್ತೋತ್ರ ಓದಿ.
ಕನ್ಯಾ:
ಹೊಸ ಕಾರ್ಯಕ್ಷೇತ್ರದಲ್ಲಿ ಎಲ್ಲರ ಸಹಕಾರ. ಪ್ರತಿಭೆ ಹಾಗೂ ಕಾರ್ಯನಿಷ್ಠೆಗೆ ಉನ್ನತರ ಮೆಚ್ಚುಗೆ. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆಯ ಭರವಸೆ. ದೂರದೂರಿಗೆ ಪ್ರಯಾಣ ಮುಂದಕ್ಕೆ. ಅಧ್ಯಾಪಕರ ಆತಂಕ ನಿವಾರಣೆ. ಗಣೇಶ ಪಂಚರತ್ನ, ಆಂಜನೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ತುಲಾ:
ಏಕಸ್ವಾಮ್ಯ ಸಾಧಿಸುವ ಪ್ರಯತ್ನ ವಿಫಲ.. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಶುಭಸೂಚನೆ. ಲೇವಾದೇವಿ ವ್ಯವಹಾರ ಬೇಡ. ಅನ್ಯರ ಸಂಸಾರ ಕೆಡಿಸುವ ಯತ್ನಕ್ಕೆ ಸೋಲು. ಹಿರಿಯರ ಆಸ್ತಿ ಕಬಳಿಸುವ ಸ್ವಾರ್ಥಿಗಳಿಗೆ ಸೋಲು. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ವೃಶ್ಚಿಕ:
ವಿವಿಧ ಬಗೆಯ ವೃತ್ತಿಗಳವರಿಗೆ ಹಿತಾನುಭವ.. ಹೆಚ್ಚಿನ ಕ್ಷೇತ್ರಗಳ ಉದ್ಯೋಗಿಗಳಿಗೆ ನೆಮ್ಮದಿ. ಸರ್ಕಾರಿ ಅಧಿಕಾರಿಗಳಿಗೆ ಪುಢಾರಿಗಳ ಕಾಟ. ಉನ್ನತ ರಾಜಕಾರಣಿಗಳಿಗೆ ಅಧಿಕಾರ ದಾಹ. ವಸ್ತ್ರ, ಸಾಮಗ್ರಿಗಳ ಖರೀದಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಧನು:
ಪ್ರತಿಭೆ ಕೌಶಲ ಎರಡೂ ಉಳ್ಳವರಿಗೆ ಹಿನ್ನಡೆ ಇಲ್ಲ.. ಉದ್ಯೋಗ ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಹಿರಿಯರ ಆರೋಗ್ಯದ ಕುರಿತು ಕಾಳಜಿ. ಗಣೇಶ ಪಂಚರತ್ನ, ಶಿವಸಹಸ್ರನಾಮ, ಲಕ್ಷ್ಮೀಸ್ತೋತ್ರ ಓದಿ.
ಮಕರ:
ಪ್ರಕೃತಿಯೊಂದಿಗೆ ಸಾಮರಸ್ಯ ಸಾಧಿಸುವ ಪ್ರಯತ್ನ.. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಬಂಧುವರ್ಗದಲ್ಲಿ ವೈಷಮ್ಯ ನಿವಾರಣೆ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ಮಕ್ಕಳನ್ನು ಸಾಕುಪ್ರಾಣಿಗಳಿಂದ ದೂರವಿಡಿ. ಗಣೇಶ ಅಷ್ಟಕ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.
ಕುಂಭ:
ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ.. ಸರ್ಕಾರಿ ನೌಕರರಿಗೆ ತಾತ್ಕಾಲಿಕ ನೆಮ್ಮದಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತೃಪ್ತಿಯ ಅನುಭವ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ. ಗಣೇಶ ಅಷ್ಡಕ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಹಿರಿಯ ಅಧಿಕಾರಿಗಳಿಂದ ಸರ್ವವಿಧ ಸಹಾಯ.. ಜನಸೇವಾ ಕಾರ್ಯಗಳಿಗೆ ಚಾಲನೆ. ಸ್ವಂತ ಉದ್ಯಮ ಹೊಸ ರೂಪದಲ್ಲಿ ಆರಂಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಗೆ ಪ್ರಯತ್ನ ಅವಶ್ಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.