ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ ಫಲ?

Daily Horoscope: ಇಂದು (ಸೋಮವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Sep 14, 2026 - 09:42
ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ ಫಲ?

ಮೇಷ:

ಮೇಲಿಂದ ಮೇಲೆ ಬರುವ ವಿಚಿತ್ರ ಸಂದರ್ಭಗಳಲ್ಲಿ ವಿಜಯ.. ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಅನುಕೂಲ. ಹೋಟೆಲ್ ಉದ್ಯಮಿಗಳಿಗೆ ಬಹಳಷ್ಟು ನೆಮ್ಮದಿ. ದೂರ ದೇಶದಲ್ಲಿರುವ ಮಕ್ಕಳಿಂದ ಸಂತೋಷದ ಸಮಾಚಾರ. ಮಹಿಳೆಯರ ಉದ್ಯಮಗಳಿಗೆ ಕೀರ್ತಿ. ಗಣೇಶ ಕವಚ, ಶಿವಪಂಚಾಕ್ಷರ ಸ್ತೋತ್ರ, ಶನಿಮಹಾತ್ಮೆ ಓದಿ.

ವೃಷಭ:

ಎಲ್ಲ ಬಗೆಯ ಕಾರ್ಯಗಳು ಯಶಸ್ವಿ.. ಉದ್ಯೋಗಸ್ಥರಿಂದ ಹೊಸ ಅವಕಾಶಗಳ ಸದುಪಯೋಗ. ಖಾದಿಯ ಸಿದ್ಧ ಉಡುಪು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ನರ್ಸಿಂಗ್ ಶಿಕ್ಷಣ  ಪಡೆದವರಿಗೆ ಉದ್ಯೋಗಾವಕಾಶ. ದೀರ್ಘಕಾಲದ  ವೈಮನಸ್ಸು ಮುಗಿದು ಆನಂದ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ಮಿಥುನ:

ಗಟ್ಟಿಯಾದ ಸಂಕಲ್ಪದಿಂದ ಸಾಧ್ಯವಾಗುವ ಕೆಲಸಗಳು.. ತಾತ್ಕಾಲಿಕ ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಮಾತಿನಲ್ಲಿ ತಪ್ಪದಂತೆ ಎಚ್ಚರಿಕೆ ಇರಲಿ. ಯುವಜನರಿಗೆ ಧಾರ್ಮಿಕ ಮಾರ್ಗದರ್ಶನದ ವ್ಯವಸ್ಥೆಯ ನೇತೃತ್ವ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.

ಕರ್ಕಾಟಕ:

ಪಟ್ಟುಬಿಡದ ಯತ್ನದಿಂದ ಕಾರ್ಯಸಿದ್ಧಿ.. ಉದ್ಯೋಗಸ್ಥರ ಆರ್ಥಿಕ ತೊಂದರೆಗೆ ತಾತ್ಕಾಲಿಕ ಪರಿಹಾರ. ಉದ್ಯಮಗಳಿಗೆ ಸರ್ಕಾರಿ ಸಬ್ಸಿಡಿ ಲಭ್ಯ. ಮಹಿಳೆಯರ ಸ್ವೋದ್ಯೋಗ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.ಗಣೇಶ ಅಷ್ಟಕ, ಮಹಿಷಮರ್ದಿನಿ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.

ಸಿಂಹ:

ಪಾಲಿಗೆ ಬರುವ ಹೊಸ ಜವಾಬ್ದಾರಿಗಳು.. ಒಂದಕ್ಕಿಂತ ಹೆಚ್ಚು ವ್ಯವಹಾರಗಳತ್ತ ಗಮನ ಕೊಡಲು ಒತ್ತಡ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮದ ಸ್ವರೂಪ ಬದಲಾವಣೆಯ ಪ್ರಕ್ರಿಯೆಗೆ ಚಾಲನೆ. ಆಧ್ಯಾತ್ಮಿಕ ಗುರುಗಳ ಭೇಟಿ ಸಂಭವ. ಗಣೇಶ ಸ್ತೋತ್ರ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ರಾಜರಾಜೇಶ್ವರೀ ಅಷ್ಟಕ ಓದಿ.

ಕನ್ಯಾ:

ವೃತ್ತಿ ಪರಿಣತಿಯಿಂದ ಸರ್ವವಿಧ ಲಾಭ.. ಹೊಸ ಕಾರ್ಯಕ್ಷೇತ್ರದಲ್ಲಿ ಎಲ್ಲರ ಸಹಕಾರ. ಪ್ರತಿಭೆ ಹಾಗೂ ಹಾಗೂ ಕಾರ್ಯನಿಷ್ಠೆಗೆ ಯೋಗ್ಯ ಪ್ರತಿಫಲ. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆ ಸಿಗುವ  ಭರವಸೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಗಣೇಶ ಕವಚ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ಗುರುಸ್ತೋತ್ರ ಓದಿ.

ತುಲಾ:

ಮೋಸದ ಬಲೆಯಲ್ಲಿ ಕೆಡವುವ ಯತ್ನ ವಿಫಲ.. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಸ್ವಲ್ಪ ಸಡಿಲು. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ  ಸಕಾಲಿಕ ಮಾರ್ಗದರ್ಶನ. ಲೇವಾದೇವಿ ವ್ಯವಹಾರ ಬೇಡ. ಹುಟ್ಟೂರಿನ ಅಭಿವೃದ್ಧಿ ಕಾರ್ಯದಲ್ಲಿ ಭಾಗಿ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.

ವೃಶ್ಚಿಕ:

ಎಲ್ಲ ಬಗೆಯ ಪರಿಸ್ಥಿತಿಗಳಲ್ಲೂ ಅನುಕೂಲದ ಪರಿಣಾಮ.. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಹಾನಿ ಇಲ್ಲ. ಸರ್ಕಾರಿ ಅಧಿಕಾರಿಗಳ ಆತಂಕ ಕೊಂಚ ದೂರ. ರಾಜಕಾರಣಿಗಳಿಗೆ ಬಿಗಿಯಾದ ಇಕ್ಕಟ್ಟಿನ ಪರಿಸ್ಥಿತಿ. ವಸ್ತ್ರ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಗಣಪತಿ ಅಥರ್ವಶೀರ್ಷ, ದಾರಿದ್ರ್ಯದಹನ ಶಿವಸ್ತೋತ್ರ, ನರಸಿಂಹ ಕವಚ ಓದಿ.

ಧನು:

ತಡೆಯಿಲ್ಲದ ಕ್ರಿಯಾಶೀಲತೆಗೆ ಸರ್ವತ್ರ ಮೆಚ್ಚುಗೆ.. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಹಿರಿಯ ನಾಗರಿಕರಿಗೆ ಸರ್ಕಾರಿ ನೆರವು ದೊರಕಿಸಲು ಸಹಾಯ. ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಅವಿವಾಹಿತರಿಗೆ ವಿವಾಹ ಯೋಗ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಮಕರ:

ಸಂದಿಗ್ಧ ಪರಿಸ್ಥಿತಿಗಳಿಂದ ಬಿಡುಗಡೆ.. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಬಂಧುವರ್ಗದಲ್ಲಿ ವೈಷಮ್ಯ ನಿವಾರಣೆ. ಗೃಹೋಪಯೋಗಿ ಸಾಮಗ್ರಿಗಳ ದುರಸ್ತಿಗೆ ಧನವ್ಯಯ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕುಂಭ:

ಉದ್ಯೋಗಸ್ಥರಿಗೆ ಉತ್ತೇಜಕ ಅನುಭವ.. ಸರ್ಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿಗಳು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಿಂದ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸದ ಸಮಾಚಾರ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ. ಗಣೇಶ ಕವಚ, ರಾಮ ಭುಜಂಗಪ್ರಯಾತ ಸ್ತೋತ್ರ, ಶನಿ ಮಹಾತ್ಮೆ ಓದಿ. 

ಮೀನ:

ಉದ್ಯೋಗ ಸ್ಥಾನದಲ್ಲಿ ಸಹಚರರ ಸ್ಪಂದನ.. ಸೇವಾ ರೂಪದ ಕಾರ್ಯಗಳು ಮುನ್ನಡೆ ಕೊಂಚ ಕಾಲದಿಂದ ನಿಲ್ಲಿಸಿದ್ದ ಉದ್ಯಮ ಪುನರಾರಂಭ.  ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.