ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ ಫಲ?
Daily Horoscope: ಇಂದು (ಬುಧವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಎಲ್ಲಾ ಬಗೆಯ ಉದ್ಯಮಗಳಿಗೆ ಅನುಕೂಲ.. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಪ್ರಕೃತಿಯ ಜೊತೆಯಲ್ಲಿ ಒಡನಾಟದಿಂದ ಆನಂದ. ಮಹಾಪುರುಷರ ದರ್ಶನಯೋಗ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
ವೃಷಭ:
ಸಾಂಸಾರಿಕ-ಸಾಮಾಜಿಕ ಜೀವನದಲ್ಲಿ ಸಮತೋಲನ.. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ಗೌರವ. ಗೃಹೋದ್ಯಮದ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ. ವೃತ್ತಿಪರರಿಗೆ ಸಮಯದ ಸವಾಲು. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ. ಗಣೇಶ ಕಬಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಗುರುಸ್ತೋತ್ರ ಓದಿ.
ಮಿಥುನ:
ಶೀಘ್ರ ಅಲ್ಲವಾದರೂ ತೀರ ತಡಮಾಡದೆ ಸ್ಪಂದಿಸಿರಿ.. ಉದ್ಯಮಿಗಳ ಪಾಲಿಗೆ ಒಳ್ಳೆಯ ದಿನ ಅಕಸ್ಮಾತ್ ಧನಲಾಭ ಸಂಭವ. ಎಳೆಯರ ಮನೋವಿಕಾಸಕ್ಕೆ ಸೂಕ್ತ ಪ್ರಯತ್ನ. ದಂಪತಿಗಳ ನಡುವೆ ಹೊಂದಾಣಿಕೆ ಇರಲಿ. ಗಣೇಶ ಅಷ್ಟಕ, ಬಿಲ್ವಾಷ್ಟಕ, ಮಹಿಷಮರ್ದಿನಿ ಸ್ತೋತ್ರ ಓದಿ.
ಕರ್ಕಾಟಕ:
ನಿತ್ಯಜೀವನದ ಜಂಜಾಟದಿಂದ ಸ್ವಲ್ಪ ಬಿಡುಗಡೆ.. ಉದ್ಯೋಗ ಸ್ಥಾನದಲ್ಲಿ ಸೌಹಾರ್ದ ವಾತಾವರಣ. ಖಾದಿ ಉದ್ಯಮ ಬೆಳೆಸಲು ಆಸಕ್ತಿ. ತಾಯಿಯ ಆರೋಗ್ಯ ಗಮನಿಸಿ. ಭಜನೆ, ಹರಿಕಥೆ, ಸತ್ಸಂಗಗಳ ಕಡೆಗೆ ಸೆಳೆತ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಭುಗ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
ಸಿಂಹ:
ಉದ್ಯೋಗ ಸ್ಥಾನದಲ್ಲಿ ಪ್ರಯೋಗಗಳು ಯಶಸ್ವಿ.. ವಸ್ತ್ರ, ಆಭರಣಾದಿ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ವ್ಯಾಪಾರ. ದ್ವಿಚಕ್ರ ವಾಹನ ದುರಸ್ತಿಗಾರರಿಗೆ ಅಧಿಕ ಲಾಭ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ. ವ್ಯವಹಾರ ಸಂಬಂಧ ತಿರುಗಾಟದ ಸಾಧ್ಯತೆ. ಗಣೇಶ ಕವಚ, ದತ್ತಪಂಜರ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಕನ್ಯಾ:
ಏನಾದರೂ ಸಾಧಿಸಬೇಕೆಂಬ ಹಂಬಲ ಈಡೇರಿಕೆ.. ಕೃಷಿ ಆಧಾರಿತ ಉದ್ಯಮಗಳಿಗೆ ಅನುಕೂಲದ ದಿನ. ಗೃಹೋಪಕರಣ ಖರೀದಿಗೆ ಧನವ್ಯಯ ಹೊಲಿಗೆ ಕೆಲಸ ಬಲ್ಲವರಿಗೆ ಉದ್ಯೋಗಾವಕಾಶ.ವಾಹನ ಚಾಲನೆಯಲ್ಲಿ ಎಚ್ಚರ. ಗಣೇಶ ದ್ವಾದಶನಾಮ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
ತುಲಾ:
ನಾಜೂಕುತನದ ವ್ಯವಹಾರದಿಂದ ವಿಜಯ.. ಕಸೂತಿ, ಕರಕೌಶಲದ ಕೆಲಸಗಳನ್ನು ಬಲ್ಲವರಿಗೆ ಬೇಡಿಕೆ. ಮಕ್ಕಳ ಬಹುಮುಖ ಪ್ರತಿಭೆ ಬೆಳವಣಿಗೆಗೆ ಪ್ರೋತ್ಸಾಹ. ಇಷ್ಟದೇವರ ದರ್ಶನದಿಂದ ಹರ್ಷ. ಸಾಹಿತ್ಯ ಅಧ್ಯಯನಕ್ಕೆ ಸಮಯ ನೀಡಿಕೆ. ಗಣೇಶ ಕವಚ, ನರಸಿಂಹ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
ವೃಶ್ಚಿಕ:
ಉದ್ಯೋಗ ಮುಂದುವರಿಸಲು ಪ್ರೋತ್ಸಾಹ.. ಒಂದಿಲ್ಲೊಂದು ಬಗೆಯ ಹವ್ಯಾಸ ಬೆಳೆಸಿಕೊಳ್ಳುವ ಪ್ರಯತ್ನ. ಗೃಹೋದ್ಯಮ ಉತ್ಪನ್ನಗಳಿಗೆ ಹೊಸ ಗಿರಾಕಿಗಳು. ಉದ್ಯೋಗ ಅರಸುವ ಶಿಕ್ಷಿತರಿಗೆ ಮಾರ್ಗದರ್ಶನ. ನಿವೃತ್ತಿ ಜೀವನಕ್ಕೆ ಮುದನೀಡುವ ಸನ್ನಿವೇಶ. ಸಂಕಷ್ಟನಾಶನ ಗಣೇಶ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಧನು:
ಸೇವಾಕಾರ್ಯಗಳಲ್ಲಿ ಕಾಲಯಾಪನೆ.. ಉದ್ಯೋಗಸ್ಥರ ನಡುವೆ ಪರಸ್ಪರ ಸಹಕಾರ. ಸಣ್ಣ ಗೃಹೋದ್ಯಮಗಳಿಗೆ ಶುಕ್ರದೆಶೆ. ಉದ್ಯೋಗಾಸಕ್ತರಿಗೆ ಯೋಗ್ಯ ಅವಕಾಶ. ಕರಕುಶಲ ಸಾಮಗ್ರಿ ತಯಾರಕರಿಗೆ ಪ್ರೋತ್ಸಾಹ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.
ಮಕರ:
ಮಾತೃ ಸಮಾನ ವ್ಯಕ್ತಿಯಿಂದ ಮಾರ್ಗದರ್ಶನ.. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಮಕ್ಕಳ ಜ್ಞಾನವೃದ್ಧಿಗೆ ವಿಶೇಷ ಪ್ರಯತ್ನ.ಅಸಹಾಯಕರಿಗೆ ನೆರವಾಗುವ ಅವಕಾಶ. ಬಂಧುಗಳೊಂದಿಗೆ ಸಂತೋಷ ಕೂಟದ ಸಾಧ್ಯತೆ. ಗಣೇಶ ಕವಚ, ದತ್ತಪಂಜರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕುಂಭ:
ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ.. ಉದ್ಯೋಗಸ್ಥರಿಗೆ ಸತ್ವಪರೀಕ್ಷೆಯಲ್ಲಿ ಜಯ. ವೃತ್ತಿರಂಗದ ಮಿತ್ರರಿಂದ ಸಹಾಯಕ್ಕೆ ಕೋರಿಕೆ. ಗ್ರಾಹಕರ ವಿಶ್ವಾಸ ಉಳಿಸುವ ಪ್ರಯತ್ನ. ಅವಿವಾಹಿತ .ಹುಡುಗರಿಗೆ ವಿವಾಹ ಯೋಗ. ಗಣೇಶ ಅಷ್ಟಕ, ವೆಂಕಟೇಶ್ವರ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಕೊಂಚ ಸಡಿಲಾದ ಕೆಲಸಗಳ ಒತ್ತಡ.. ಪ್ರಭಾವಿ ವ್ಯಕ್ತಿಯ ನೆರವಿನ ಭರವಸೆ. ಭೂಮಿ ವ್ಯವಹಾರ ಮತ್ತೆ ಆರಂಭ. ಗುರುಸಮಾನ ವ್ಯಕ್ತಿಯ ಆಗಮನ. ವ್ಯವಹಾರ ಸಂಬಂಧ ಪ್ರಯಾಣದ ಸಾಧ್ಯತೆ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.