ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ?

Daily Horoscope: ಇಂದು (ಭಾನುವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Sep 23, 2026 - 10:05
ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ?

ಮೇಷ: 

ಯಶಸ್ಸಿನತ್ತ ನಡೆಗೆ ತಡೆಯಿಲ್ಲ.. ಉದ್ಯೋಗ ಸ್ಥಾನದಲ್ಲಿ ನಿಲ್ಲದ ಮುನ್ನಡೆ. ಹೊಸ ಹೂಡಿಕೆಗಳಲ್ಲಿ ಲಾಭದ ಸೂಚನೆ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ದಾನ ಪ್ರವೃತ್ತಿಯ ನಾಯಕರಿಗೆ ವಿಜಯ. ಗಣೇಶ ಕವಚ, ಶಿವಪಂಚಾಕ್ಷರ ಸ್ತೋತ್ರ, ಶನಿಮಹಾತ್ಮೆ ಓದಿ.

ವೃಷಭ:

ಇಂದಿನ  ಬುಧವಾರ ವಿಶೇಷ ಫಲದಾಯಕ.. ಖಾದಿ ಉಡುಪು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶ್ರಮಿಕ, ಮಾಲಿಕ ಎರಡು ವರ್ಗಗಳಿಗೂ ಅನುಕೂಲ. ಕೇಟರಿಂಗ್ ವ್ಯವಹಾರಸ್ಥರಿಗೆ ಉತ್ತಮ ಲಾಭ. ವಿದ್ಯಾರ್ಥಿಗಳ ಅಧ್ಯಯನಾಸಕ್ತಿ ವೃದ್ಧಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಆದಿತ್ಯ ಹೃದಯ ಓದಿ.

ಮಿಥುನ:

ಸಮತೂಕದ ನಿಯಮ ಎಲ್ಲೆಡೆಗೂ ಅನ್ವಯ.. ದೂರ ಪ್ರಯಾಣ ಮಾಡುವುದು ಬೇಡ. ಹಿತ ಶತ್ರುಗಳ ವಿಷಯದಲ್ಲಿ ಎಚ್ಚರ ಇರಲಿ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಲೇಖಕರಿಗೆ ಏಕಾಗ್ರತೆಯ ಕೊರತೆ. ಗಣೇಶ ಪಂಚರತ್ನ, ರಾಮರಕ್ಷಾ ಸ್ತೋತ್ರ, ದೇವೀಕವಚ ಓದಿ.

ಕರ್ಕಾಟಕ:

ಆರ್ಥಿಕ ಸಮಸ್ಯೆಗಳಿಗೆ ಸುಲಭ ಪರಿಹಾರ.. ಉದ್ಯಮಗಳಿಗೆ ವಿದೇಶೀ ಮೂಲದಿಂದ  ನೆರವು. ಮಹಿಳಾ ಉದ್ಯಮಿಗಳಿಗೆ ಸಾಂಸ್ಥಿಕ ನೆರವು ಲಭ್ಯ. ಹಿರಿಯರಿಗೆ ಮನೋಬಲದಿಂದ ಆರೋಗ್ಯ ಪ್ರಾಪ್ತಿ. ಕುಟುಂಬದ ಸಮಗ್ರ ಪ್ರಗತಿ. ಗಣೇಶ ಅಷ್ಟಕ, ಆದಿತ್ಯ ಹೃದಯ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ಸಿಂಹ:

ಸಂದಿಗ್ಧ ಪರಿಸ್ಥಿತಿಯಿಂದ ಪಾರು.. ಹಲವು  ವ್ಯವಹಾರಗಳತ್ತ ಲಕ್ಷ್ಯ ನೀಡಿಕೆ ಅನಿವಾರ್ಯ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಸಿವಿಲ್ ಎಂಜಿನಿಯರರಿಗೆ ಅನುಕೂಲದ ದಿನ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಮುಂದಕ್ಕೆ. ಗಣಪತಿ ಅಥರ್ವಶೀರ್ಷ, ನರಸಿಂಹ ಕವಚ,, ಹನುಮಾನ್ ಚಾಲೀಸಾ ಓದಿ.

ಕನ್ಯಾ:

ವಿಘ್ನ ಸಂತೋಷಿ ಕುಹಕಿಗಳಿಗೆ ಸೋಲು.. ಪ್ರತಿಭೆ ಹಾಗೂ ಕಾರ್ಯನಿಷ್ಠೆಗೆ ಉನ್ನತರ ಮೆಚ್ಚುಗೆ. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆಯ  ಭರವಸೆ. ದೂರದೂರಿಗೆ ಪ್ರಯಾಣ ಮುಂದಕ್ಕೆ. ಅಧಿಕಾರಿ ವರ್ಗದ ಆತಂಕ ನಿವಾರಣೆ. ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ ಶನಿಸ್ತೋತ್ರ ಓದಿ.

ತುಲಾ:

ಉನ್ನತ ಹುದ್ದೆಯಲ್ಲಿರುವವರಿಗೆ ದೈವಸಹಾಯ.. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ  ಶುಭಸೂಚನೆ. ಲೇವಾದೇವಿ ವ್ಯವಹಾರ ಬೇಡ. ಪರೋಪಕಾರದಿಂದ ಧನ್ಯತಾಭಾವ. ಹಿರಿಯರ ಆಸ್ತಿ ಜೋಪಾನಕ್ಕೆ ಕ್ರಮ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ರಾಜರಾಜೇಶ್ವರಿ ಅಷ್ಟಕ ಓದಿ.

ವೃಶ್ಚಿಕ:

ವಿವಿಧ ಬಗೆಯ ವೃತ್ತಿಗಳವರಿಗೆ ಹಿತಾನುಭವ.. ಉದ್ಯೋಗಸ್ಥರ ಸ್ಥಾನಕ್ಕೆ ಚ್ಯುತಿ ಇಲ್ಲ. ಸರ್ಕಾರಿ ಅಧಿಕಾರಿಗಳಿಗೆ ಪುಢಾರಿಗಳ ಕಾಟ. ಉನ್ನತ ರಾಜಕಾರಣಿಗಳಿಗೆ ಅಧಿಕಾರ ದಾಹ. ವಸ್ತ್ರ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಗಣಪತಿ ಅಥರ್ವಶೀರ್ಷ, ದತ್ತಜರ ಸ್ತೋತ್ರ, ಋಣಮೋಚನ ಮಂಗಳಸ್ತೋತ್ರ ಓದಿ.

ಧನು:

ಹುಟ್ಟು ಪ್ರತಿಭಾವಂತರು ಹೆದರಬೇಕಾಗಿಲ್ಲ.. ಉದ್ಯೋಗ  ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಕಿರಿಯರಿಗೆ ಸಹಜೀವನದ ಪಾಠ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಕವಚ, ಹನುಮಾನ್ ಚಸಲೀಸಾ ಓದಿ.

ಮಕರ:

ಸಮತೂಕ, ಸಾಮರಸ್ಯ ಯಶಸ್ಸಿನ ಗುಟ್ಟು.. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಬಂಧುವರ್ಗದಲ್ಲಿ ವೈಷಮ್ಯ ನಿವಾರಣೆ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ಹಿತೈಷಿಯ ಅಕಸ್ಮಾತ್ ಭೇಟಿ. ಗಣೇಶ ಪಂಚರತ್ನ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕುಂಭ: 

ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ.. ಸರ್ಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿಗಳು. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತೃಪ್ತಿಯ ಅನುಭವ.ಕೃಷ್ಯುತ್ಪನ್ನಗಳಿಂದ ಸಾಮಾನ್ಯ ಲಾಭ. ಗಣೇಶ ಸ್ತೋತ್ರ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.

ಮೀನ:

ಅಧಿಕಾರಿ ವರ್ಗದಿಂದ ಸರ್ವವಿಧ ಸಹಾಯ.. ಎಲ್ಲ ಬಗೆಯ ಕಾರ್ಯಗಳು ಮುನ್ನಡೆ. ಸ್ವಂತ ಉದ್ಯಮ ಪ್ರಗತಿ ಪಥದಲ್ಲಿ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಯ ಪ್ರಯತ್ನ ಅವಶ್ಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.