ದಿನ ಭವಿಷ್ಯ: ಇಂದು ಯಾರಿಗೆ ಶುಭ?

Daily Horoscope: ಇಂದು (ಗುರುವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Sep 24, 2026 - 09:55
ದಿನ ಭವಿಷ್ಯ: ಇಂದು ಯಾರಿಗೆ ಶುಭ?

ಮೇಷ:

ಕೆಲಸವನ್ನು ಅವಧಿಗೆ ಮೊದಲೇ  ಮುಗಿಸುವ ಪ್ರಯತ್ನ.. ಹೊರೆಗಳು ಹೆಚ್ಚಾಗುವ ಸಾಧ್ಯತೆ. ಎಣಿಸಿದ ವೇಗದಲ್ಲಿ ಕಾರ್ಯ ಮುಗಿಸಲು ಎಲ್ಲರ ಸಹಕಾರ. ವಾಹನ ಚಾಲನೆಯಲ್ಲಿ ಎಚ್ಚರ. ವಸ್ತ್ರ ವ್ಯಾಪಾರಿಗಳಿಗೆ ವಿಶೇಷ ಲಾಭ. ಗಣೇಶ ಕವಚ, ಶಿವನಾಮಾವಲ್ಯಷ್ಟಕ, ಶನಿಮಹಾತ್ಮೆ ಓದಿ.

ವೃಷಭ:

ಸದ್ವರ್ತನೆಗೆ ಸಿಕ್ಕಿದ ಗೌರವ.. ಗೃಹೋದ್ಯಮದ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ. ಆರೋಗ್ಯದ ಕುರಿತು ಸಕಾಲಿಕ ಜಾಗ್ರತೆ. ಉದ್ಯೋಗಾಸಕ್ತರಿಗೆ  ನೌಕರಿ ಸಿಗುವ ಸೂಚನೆ. ವಿವಾಹಾಪೇಕ್ಷಿಗಳಿಗೆ ಶುಭ ಸೂಚನೆ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.

ಮಿಥುನ:

ಯಶಸ್ಸಿನ ವಿಷಯದಲ್ಲಿ ಅನುಮಾನ ಬೇಡ.. ಉದ್ಯಮಿಗಳ ಕೀರ್ತಿ ವರ್ಧನೆಗೆ ಪೂರಕ ವಾತಾವರಣ. ಪಿತ್ರಾರ್ಜಿತ ಆಸ್ತಿಯಲ್ಲಿ ಫಸಲು ಹೆಚ್ಚಳ. ಪರಿಸರ ರಕ್ಷಣೆಗೆ ಶ್ರಮದಾನ. ಮನೆಮಂದಿಯ ನಡುವೆ ಪ್ರೀತಿ, ಸಾಮರಸ್ಯ ವೃದ್ಧಿ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ಕರ್ಕಾಟಕ:

ದಾರಿ ತಪ್ಪಿಸಲು ಯತ್ನಿಸುವವರ ಬಗೆಗೆ ಎಚ್ಚರ.. ಹಿರಿಯರನ್ನು ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆ. ಖಾದಿ ಉದ್ಯಮ ಬೆಳೆಸಲು ಆಸಕ್ತಿ. ದೇವತಾರಾಧನೆ, ಸತ್ಸಂಗಗಳ ಕಡೆಗೆ ಸೆಳೆತ. ಆಭರಣ ತಯಾರಿ ಬಲ್ಲವರಿಗೆ ಉದ್ಯೋಗಾವಕಾಶ. ಗಣೇಶ ದ್ವಾದಶನಾಮ ಸ್ತೋತ್ರ, ನರಸಿಂಹ ಕವಚ, ನವಗ್ರಹ ಮಂಗಲಾಷ್ಟಕ ಓದಿ.

ಸಿಂಹ:

ಮುಟ್ಟಿದ್ದೆಲ್ಲವೂ ಚಿನ್ನವಾಗುವ ದಿನ.. ವಸ್ತ್ರ, ಆಭರಣಾದಿ ವ್ಯಾಪಾರಿಗಳಿಗೆ  ನಿರೀಕ್ಷೆ ಮೀರಿ ವ್ಯಾಪಾರ. ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಕೆಲಸಗಾರರಿಗೆ ಕೈತುಂಬಾ ಕೆಲಸ. ಮನೆಯವರೊಂದಿಗೆ ದೇವೀಕ್ಷೇತ್ರಕ್ಕೆ ಭೇಟಿ. ವಿದೇಶದಲ್ಲಿ ನೆಲೆಸಿರುವ ಮಿತ್ರನಿಂದ ಕರೆ. ಗಣೇಶ ಸ್ತೋತ್ರ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.

ಕನ್ಯಾ:

ಉದ್ಯೋಗಸ್ಥರ ಪಾಲಿಗೆ ನೆಮ್ಮದಿಯ ದಿನ..  ಎಲೆಕ್ಟ್ರಾನಿಕ್ಸ್ , ಎಲೆಕ್ಟ್ರಿಕಲ್ಸ್ ವ್ಯಾಪಾರ ವೃದ್ಧಿ. ವೃತ್ತಿ ಪರಿಣತಿ ಹೆಚ್ಚಿಸಿಕೊಳ್ಳಲು ನುರಿತವರ  ಮಾರ್ಗದರ್ಶನ. ಕುಟುಂಬದ ಮನೆಯಲ್ಲಿ ವಿವಾಹ ಸಂಭ್ರಮ. ಮಕ್ಕಳ ಆತ್ಮವಿಶ್ವಾಸ ವೃದ್ಧಿಗೆ ಪ್ರಯತ್ನ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.

ತುಲಾ:

ನಿರಾಳವಾದ ಮನಸ್ಥಿತಿಯ ಅನುಭವ.. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಕಸೂತಿ, ಕರಕೌಶಲದ ಕೆಲಸಗಳನ್ನು ಬಲ್ಲವರಿಗೆ ಬೇಡಿಕೆ. ಮಕ್ಕಳ ಬಹುಮುಖ ಪ್ರತಿಭೆ ಬೆಳವಣಿಗೆಗೆ ಪ್ರೋತ್ಸಾಹ. ತಾಯಿಯ ಕಡೆಯ ಬಂಧುಗಳ ಆಗಮನ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ದೇವೀಕವಚ ಓದಿ.

ವೃಶ್ಚಿಕ:

ಆವರಿಸಿದ ಜಾಡ್ಯದಿಂದ ಬಿಡುಗಡೆ.. ಗೃಹೋದ್ಯಮ ಉತ್ಪನ್ನಗಳಿಗೆ ಹೊಸ ಗಿರಾಕಿಗಳು. ಹೊಲಿಗೆ ಕೆಲಸ ಬಲ್ಲವರಿಗೆ ಕೆಲಸಕ್ಕೆ ಕರೆ.  ಉದ್ಯೋಗ ಅರಸುವ ಶಿಕ್ಷಿತರಿಗೆ  ಮಾರ್ಗದರ್ಶನ.  ಸಂಗೀತಾದಿ ಕಲೆಗಳ ಆಸ್ವಾದನೆಯಿಂದ ಆನಂದ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಅಷ್ಟಲಕ್ಷ್ಮೀ ಸ್ತೋತ್ರ ಓದಿ.

ಧನು:

ಪರಸ್ಪರ ಸಹಕಾರದಿಂದ ಸುಲಭವಾದ ಕಾರ್ಯನಿರ್ವಹಣೆ.. ಸಣ್ಣ ಪ್ರಮಾಣದ ಗೃಹೋದ್ಯಮ ಪ್ರಗತಿಯಲ್ಲಿ.ಪಾಲುದಾರಿಕೆ ವ್ಯವಹಾರದಲ್ಲಿ ಶೀಘ್ರ ಪ್ರಗತಿ. ಉದ್ಯೋಗಾಸಕ್ತರಿಗೆ ಯೋಗ್ಯ ಅವಕಾಶ ಗೋಚರ. . ಮನೆಯಲ್ಲಿ ಇಷ್ಟದೇವತಾರ್ಚನೆ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

ಮಕರ:

ಸಂಸಾರ, ಉದ್ಯೋಗ ಇವೆರಡರಲ್ಲಿ ಸಮತೋಲನ.. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ವೃತ್ತಿಪರ ಉದ್ಯೋಗಸ್ಥರಿಗೆ  ಸಮಯದ ಸವಾಲು. ಮಕ್ಕಳ ಜ್ಞಾನವೃದ್ಧಿಗೆ ವಿಶೇಷ ಪ್ರಯತ್ನ. ಕೆಲವರಿಗೆ ಅತಿಥಿ ಸತ್ಕಾರ ಯೋಗ.. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕುಂಭ:

ಕರೆಗಳಿಗೆ ಶೀಘ್ರ ಸ್ಪಂದನ.. ಉದ್ಯೋಗಸ್ಥರಿಗೆ ಹೊಸ ವಿಭಾಗಕ್ಕೆ ಪ್ರವೇಶ. ವೃತ್ತಿರಂಗದ ಮಿತ್ರರಿಂದ ಸಹಾಯಕ್ಕೆ ಕೋರಿಕೆ. ಗ್ರಾಹಕರ ಬೇಡಿಕೆಗಳಿಗೆ ಸ್ಪಂದಿಸುವ ಒತ್ತಡ.ವ್ಯಾಪಾರ ಕ್ಷೇತ್ರದಲ್ಲಿರುವವರಿಗೆ ಶುಭ ದಿನ. ಗಣಪತಿ ಅಥರ್ವಶೀರ್ಷ, ಶಿವಕವಚ, ಶನಿಮಹಾತ್ಮೆ ಓದಿ. 

ಮೀನ:

ಸಹಜವಾದ ಕೆಲಸಗಳ ಒತ್ತಡ.. ಜನಸೇವಾ ಕಾರ್ಯಗಳಿಗೆ ಪ್ರೋತ್ಸಾಹ.  ಭೂಮಿ ಖರೀದಿ, ಮಾರಾಟದಲ್ಲಿ ಲಾಭ. ಗುರುಸಮಾನ ವ್ಯಕ್ತಿಯ ಮಾರ್ಗದರ್ಶನ. ಸಮಾಜ ಸಂಘಟನೆಯ ಯತ್ನದಲ್ಲಿ ಪ್ರಗತಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.