ದಿನ ಭವಿಷ್ಯ: ಇಂದು ಯಾರಿಗೆ ಶುಭ?

Daily Horoscope: ಇಂದು (ಭಾನುವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Sep 27, 2026 - 09:39
ದಿನ ಭವಿಷ್ಯ: ಇಂದು ಯಾರಿಗೆ ಶುಭ?

ಮೇಷ:

ಸಪ್ತಾಹದ ಕೊನೆಯ ದಿನ ಕೆಲಸಗಳನ್ನು ಮುಗಿಸುವ ಒತ್ತಡ.. ವೈಯಕ್ತಿಕ ಕೆಲಸಗಳ ಕಡೆಗೆ ಗಮನ. ಅನಿವಾರ್ಯವಾದ ಓಡಾಟ. ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು. ಆಪ್ತರಿಂದ ಸಕಾಲದಲ್ಲಿ ಸಹಾಯ ಲಭ್ಯ. ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ. ಬಂಧುಗಳ ಭೇಟಿಯ ಸಾಧ್ಯತೆ. ಗಣೇಶ ಕವಚ, ಶಿವಸಹಸ್ರನಾಮ, ಶನಿ ಮಹಾತ್ಮೆ ಓದಿ.

ವೃಷಭ:

ಸಮಸ್ಯೆಗಳಿಂದ ಮುಕ್ತವಾದ ದಿನ.. ಉದ್ಯೋಗದಲ್ಲಿ ಹೆಚ್ಚು ಸಂತೃಪ್ತಿ. ಸರ್ಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ ಹಿರಿಯ ಗೆಳೆಯರ ಅಕಸ್ಮಾತ್ ಭೇಟಿ. ಗಣೇಶ ಅಷ್ಟಕ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.

ಮಿಥುನ:

ಸಾಕಷ್ಟು ವಿಮರ್ಶಿಸಿ ಕ್ರಮ ತೆಗೆದುಕೊಳ್ಳಿ.. ಒಂದೇ ಬಾರಿಗೆ ಯಾರನ್ನೂ ನಂಬದಿರಿ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಅಸ್ವಸ್ಥರಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಶನಿಸ್ತೋತ್ರ ಓದಿ.

ಕರ್ಕಾಟಕ:

ಉತ್ಪಾದನೆಗಳಲ್ಲಿ ವೈವಿಧ್ಯ ಇದ್ದರೆ ಜಯ.. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ದೀರ್ಘಾವಧಿ ಹೂಡಿಕೆಗಳಿಂದ ಲಾಭ. ಉದ್ಯೋಗಸ್ಥರಿಗೆ ಸಾಮಾನ್ಯ ಅನುಭವ. ಮನೆಯಲ್ಲಿ ಉಲ್ಲಾಸ, ಸಮಾಧಾನ. ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ಸಿಂಹ:

ಉದ್ಯೋಗಸ್ಥರಿಗೆ  ಹಿರಿಯರ ಪ್ರೋತ್ಸಾಹ.. ವ್ಯಾಪಾರ ವೃದ್ಧಿಗೆ ಆತ್ಮೀಯರ ಸಹಾಯ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ವಾಹನ ಖರೀದಿ- ಮಾರಾಟದಲ್ಲಿ ಲಾಭ. ಬಂಧುಗಳ ಮನೆಯ ಶುಭಕಾರ್ಯದಲ್ಲಿ ಭಾಗಿ. ಸಂಕಷ್ಟನಾಶನ ಗಣೇಶ ಸ್ತೋತ್ರ, ಶಿವಕವಚ, ಹನುಮಾನ್ ಚಾಲೀಸಾ ಓದಿ.

ಕನ್ಯಾ:

ಮನೆಯಲ್ಲಿ ಅಪಾರ ಶಾಂತಿ.. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಆಶಾದಾಯಕ ಅವಕಾಶಗಳು. ಕೃಷ್ಯುತ್ಪನ್ನ ವ್ಯಾಪಾರ ಲಾಭದಾಯಕ. ಗೇಶ ಸ್ತೋತ್ರ, ರಾಜರಾಜೇಶ್ವರೀ ಅಷ್ಟಕ, ಗಣೇಶ ಕವಚ, ರಾಮ ಭುಜಂಗಪ್ರಯಾತ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.

ತುಲಾ:

ಸಾಂಸಾರಿಕ ವಲಯದಲ್ಲಿ ನಿಶ್ಚಿಂತೆ.. ಪ್ರತಿಭಾವಂತರಿಗೆ ಗೌರವ ಪ್ರಾಪ್ತಿ. ಅಕಸ್ಮಾತ್ ಧನಾಗಮ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಲಲಿತ ಕಲೆಗಳಲ್ಲಿ ಆಸಕ್ತರಿಗೆ ಅವಕಾಶ. ಗಣೇಶ ಪಂಚರತ್ನ, ಮಹಿಷಮರ್ದಿನಿ ಸ್ತೋತ್ರ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ ಓದಿ.

ವೃಶ್ಚಿಕ:

ಕೆಲವರಿಗೆ ಸವಾಲುಗಳು ಬಂದಷ್ಟು ಉತ್ಸಾಹ.. ಉದ್ಯಮದ ವ್ಯಾಪ್ತಿ ಇನ್ನಷ್ಟು ವಿಸ್ತರಣೆ. ಆಸ್ತಿ ವಿವಾದ ಮಾತುಕತೆಯಲ್ಲಿ ಪರಿಹಾರ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಗೃಹಿಣಿಯರ ಉದ್ಯಮ ಉನ್ನತ ಸ್ಥಿತಿಯಲ್ಲಿ. ಗಣೇಶ ಕವಚ, ನರಸಿಂಹ ಸ್ತೋತ್ರ, ಅಷ್ಟಲಕ್ಷ್ಮೀ ಸ್ತೋತ್ರ ಓದಿ.

ಧನು:

ಅಭಿವೃದ್ಧಿ ಕಾರ್ಯಕ್ಕೆ ಹಣ ಒಂದು ಸಮಸ್ಯೆಯಾಗದು.. ಉದ್ಯೋಗ ಸ್ಥಾನದಲ್ಲಿ ಗೌರವಕ್ಕೆ ಪಾತ್ರರಾಗುವಿರಿ. ಸಣ್ಣ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಕೃಷ್ಯುತ್ಪನ್ನಗಳಿಂದ ಸಾಮಾನ್ಯ ಲಾಭ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಆದಿತ್ಯ ಹೃದಯ ಓದಿ.

ಮಕರ:

ಸಂಸಾರ ನಿರ್ವಹಣೆಯಲ್ಲಿ ಆನಂದ.. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ-ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳಿಗೆ ಒಳ್ಳೆಯ ಬೇಡಿಕೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

ಕುಂಭ:

ಪ್ರತಿಫಲದ ವಿಷಯದಲ್ಲಿ ಸಂಶಯ ಬೇಡ.. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಮಂದಿಯ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.ಗಣೇಶ ಕವಚ, ಶಿವನಾಮಾವಲ್ಯಷ್ಟಕ, ಶನಿಮಹಾತ್ಮೆ ಓದಿ.

ಮೀನ

ಹಲವು ಶುಭಫಲಗಳ ದಿನ.. ಉದ್ಯೋಗದ ಚಿಂತೆ ಇಂದು ಇಲ್ಲ. ಸಾಮಾಜಿಕ ವಲಯದಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ  ವ್ಯಕ್ತಿಗಳಿಂದ  ಅನಿರೀಕ್ಷಿತ ಸಹಾಯ. ರಾಜಕಾರಣಿಗಳನ್ನು ದೂರವಿಟ್ಟರೆ ಕ್ಷೇಮ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.