ದಿನ ಭವಿಷ್ಯ: ಇಂದು ಯಾರಿಗೆ ಶುಭ?
Daily Horoscope: ಇಂದು (ಸೋಮವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಉದ್ಯೋಗದಲ್ಲಿ ಜವಾಬ್ದಾರಿಗಳ ಪುನರ್ವ್ಯವಸ್ಥೆ.. ಸರ್ಕಾರಿ ಉದ್ಯೋಗಸ್ಥರಿಗೆ ಸವಾಲಿನ ಸನ್ನಿವೇಶ. ಶೀಘ್ರ ಸ್ಪಂದನದಿಂದ ಯಶಸ್ಸು. ಸಣ್ಣ ಉದ್ಯಮಿಗಳಿಗೆ ಸಮಾಧಾನ. ಮಕ್ಕಳಿಗೆ ಕಲಿಕೆಯಲ್ಲಿ ಉತ್ಸಾಹ ವೃದ್ಧಿ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
ವೃಷಭ:
ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ.. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಯಂತ್ರೋಪಕರಣ ದುರಸ್ತಿಗೆ ಧನವ್ಯಯ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ. ಎಲ್ಲರಿಗೂ ಉತ್ತಮ ಆರೋಗ್ಯ ಭಾಗ್ಯಙಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಪಂಚರತ್ನ ಓದಿ.
ಮಿಥುನ:
ಯೋಜನೆಗಳ ಅನುಷ್ಠಾನದಲ್ಲಿ ಮುನ್ನಡೆ.. ಕೆಲಸವನ್ನು ಪ್ರೀತಿಸುವ ಪ್ರಯತ್ನದಲ್ಲಿ ಸಫಲ. ಹಳೆಯ ಗೆಳೆಯ ಮತ್ತೆ ಸಂಪರ್ಕಕ್ಕೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಆರೋಗ್ಯ ವೃದ್ಧಿಯಿಂದ ನೆಮ್ಮದಿ. ಗಣೇಶ, ಅಷ್ಟಕ, ವಿಷ್ಣು ಸಹಸ್ರನಾಮ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಕರ್ಕಾಟಕ:
ಎಣಿಸಿದ್ದಕ್ಕಿಂತ ಸುಲಭವಾದ ಕಾರ್ಯಸಾಧನೆ.. ಉದ್ಯೋಗಸ್ಥರಲ್ಲಿ ಕೆಲವರಿಗೆ ಸ್ಥಾನ ಬದಲಾವಣೆ. ಉದ್ಯಮಗಳಿಗೆ ಸರ್ಕಾರಿ ಸಬ್ಸಿಡಿ ಪ್ರಾಪ್ತಿ. ಮಹಿಳೆಯರ ಸ್ವೋದ್ಯೋಗ ಯೋಜನೆಗಳಿಗೆ ಕೀರ್ತಿ. ಅನವಶ್ಯ ಪ್ರಯಾಣದ ಸಾಧ್ಯತೆ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
ಸಿಂಹ:
ಉದ್ಯೋಗಸ್ಥರಿಗೆ ಮೇಲಿನವರ ಪ್ರೋತ್ಸಾಹ.. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಗುರುಸ್ತೋತ್ರ ಓದಿ.
ಕನ್ಯಾ:
ಪ್ರತಿಭಾವಂತರಿಗೆ ಸ್ಥಾನಗೌರವ.. ಸಣ್ಣ ಉದ್ಯಮ ಘಟಕಗಳಿಗೆ ಶುಭದಿನ. ಅವಿವಾಹಿತ ಪುತ್ರನಿಗೆ ವಿವಾಹ ನಿಶ್ಚಯ. ದೂರದೇಶದಲ್ಲಿರುವ ಬಂಧುಗಳಿಂದ ಶುಭವಾರ್ತೆ. ಲೇವಾದೇವಿ ವ್ಯವಹಾರ ಬಿಡುವುದರಿಂದ ಕ್ಷೇಮ. ಸಂಕಷ್ಟನಾಶನ ಗಣೇಶ. ಸ್ತೋತ್ರ, ಶಿವಾಪರಾಧ ಕ್ಷಮಾಪಣ ಸ್ತೋತ್ರ, ಆದಿತ್ಯ ಹೃದಯ ಓದಿ.
ತುಲಾ:
ಮಿತ್ರರಾಗಿ ಬದಲಾದ ಹಳೆಯ ಶತ್ರುಗಳು.. ಉತ್ಪಾದನಾ ಕ್ಷೇತ್ರದಲ್ಲಿ ಪೈಪೋಟಿ ಶಮನ. ಉದ್ಯೋಗಾಪೇಕ್ಷಿಗಳಿಗೆ ಅನುಕೂಲ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಆರೋಗ್ಯ ರಕ್ಷಣೆಯ ಕಡೆಗೆ ಗಮನ ಇರಲಿ. ಗಣೇಶ ತ್ರಿಶತಿ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ವೃಶ್ಚಿಕ:
ನಿಕಟ ಭವಿಷ್ಯದಲ್ಲಿ ಯಾವುದೇ ತೊಂದರೆಯ ಸೂಚನೆಯಿಲ್ಲ. ಉದ್ಯೋಗಸ್ಥರಿಗೆ ಒಂದು ಬಗೆಯ ನಿಶ್ಚಿಂತೆ. ಅಧಿಕಾರಿಗಳಿಗೆ ಕೊಂಚ ಕಿರಿಕಿರಿ. ರಾಜಕಾರಣಿಗಳಿಗೆ ಅನಿಶ್ಚಿತ ಪರಿಸ್ಥಿತಿ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ದಕ್ಷಿಣಾಮೂರ್ತಿ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಧನು:
ಎಡೆಬಿಡದ ಪ್ರಯತ್ನದಿಂದ ವಾತಾವರಣ ಶುದ್ಧಿ.. ಉದ್ಯಮದ ವೈವಿಧ್ಯೀಕರಣ ಯೋಜನೆ ಸಫಲ. ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಸಹಾಯ. ಮಕ್ಕಳ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ. ಆರೋಗ್ಯ ಕಾರ್ಯಕರ್ತರಿಗೆ ಕೆಲಸದ ಒತ್ತಡ. ಗಣೇಶ ದ್ವಾದಶನಾಮ ಸ್ತೋತ್ರ, ಹನುಮಾನ್ ಚಾಲೀಸಾ, ಕಾರ್ತಿಕೇಯ ಸ್ತೋತ್ರ ಓದಿ.
ಮಕರ:
ಕಾರ್ಯಕ್ಷೇತ್ರ ಬದಲಾವಣೆಯಿಂದ ಅನುಕೂಲ.. ಹೆಸರು ಕೆಡಿಸುವವರ ಮಸಲತ್ತಿಗೆ ಸೋಲು. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ. ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ. ಹಿರಿಯರನ್ನು ಸಮ್ಮಾನಿಸುವ ಅವಕಾಶ ಪ್ರಾಪ್ತಿ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.
ಕುಂಭ:
ಕೆಲಸ, ಕಾರ್ಯಗಳು ಕೊನೆಯ ಹಂತಕ್ಕೆ.. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರ್ಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಸಾಹಿತ್ಯ, ಸಂಗೀತ, ನೃತ್ಯಾದಿ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ. ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಪ್ರೋತ್ಸಾಹಕ ವಾತಾವರಣ ಕಾಣಿಸದಿದ್ದರೂ ಕಾರ್ಯದಲ್ಲಿ ಮುನ್ನಡೆ.. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಇಲಾಖೆಗಳವರಿಂದ ಉತ್ತಮ ಸಹಕಾರ. ಆವಶ್ಯಕತೆ ಉಳ್ಳವರಿಗೆ ಸಹಾಯ ಮಾಡುವ ಅವಕಾಶ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.