ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ ಫಲ?
Daily Horoscope: ಇಂದು (ಮಂಗಳವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಸಪ್ತಾಹದ ಎರಡನೆಯ ದಿನ ಅಪಾರ ಯಶಸ್ಸು.. ಉದ್ಯೋಗ ಸ್ಥಾನದಲ್ಲಿ ಸರ್ವರಿಂದ ಶ್ಲಾಘನೆ. ಹೊಸ ಹೂಡಿಕೆಗಳಲ್ಲಿ ಲಾಭದ ಸೂಚನೆ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಸಚ್ಚಾರಿತ್ರ್ಯ ಮೆರೆದ ನಾಯಕರಿಗೆ ವಿಜಯ. ಗಣೇಶ ಕವಚ, ದತ್ತಪಂಜರ ಸ್ತೋತ್ರ, ಶನಿಮಹಾತ್ಮೆ ಓದಿ.
ವೃಷಭ:
ಫಲಪ್ರದವಾದ ಮಂಗಳವಾರ.. ಖಾದಿ ಉಡುಪು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶ್ರಮಿಕ ವರ್ಗಕ್ಕೆ ಅನುಕೂಲವಾದ ವಾತಾವರಣ. ಕೇಟರಿಂಗ್ ವ್ಯವಹಾರಸ್ಥರಿಗೆ ಉತ್ತಮ ಲಾಭ. ವಿದ್ಯಾರ್ಥಿಗಳಿಗೆ ರಜೆಯ ಸಂಭ್ರಮ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
ಮಿಥುನ:
ದೇವರ ವಿಶೇಷ ಅನುಗ್ರಹದ ದಿನ.. ದೂರ ಪ್ರಯಾಣ ಮಾಡುವುದು ಬೇಡ. ಹಿತ ಶತ್ರುಗಳ ವಿಷಯದಲ್ಲಿ ಎಚ್ಚರ ಇರಲಿ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ರಾಷ್ಟ್ರಸೇವೆ ಸಲ್ಲಿಸಿದವರಿಗೆ ಸಾರ್ಥಕ ಭಾವ. ಗಣೇಶ ಪಂಚರತ್ನ, ದಕ್ಷಿಣಾಮೂರ್ತಿ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಕರ್ಕಾಟಕ:
ಸೋಲು ಎಂಬ ಶಬ್ದ ನಿಮ್ಮ ಅರ್ಥಕೋಶದಲ್ಲಿ ಇಲ್ಲ.. ಉದ್ಯೋಗಸ್ಥರಲ್ಲಿ ಹಲವರಿಗೆ ನಿರಾಳ ಭಾವ. ಉದ್ಯಮಗಳಿಗೆ ಅನಾಯಾಸವಾಗಿ ನೆರವು. ಮಹಿಳಾ ಉದ್ಯಮಿಗಳ ಆರ್ಥಿಕ ಬಲ ವೃದ್ಧಿ. ಹಿರಿಯರಿಗೆ ಮನೋಬಲದಿಂದ ಆರೋಗ್ಯ ಪ್ರಾಪ್ತಿ. ಸಂಕಷ್ಟನಾಶನ ಗಣೇಶ ಸ್ತೋತ್ರ, ನರಸಿಂಹ ಕವಚ, ಮಹಾಲಕ್ಷ್ಮಿ ಅಷ್ಟಕ ಓದಿ.
ಸಿಂಹ:
ಸರಿಯಾಗಿ ಪರೀಕ್ಷಿಸಿ ಸ್ನೇಹ ಬೆಳೆಸಿ.. ಹಲವು ವ್ಯವಹಾರಗಳತ್ತ ಗಮನ ಕೊಡಲು ಒತ್ತಡ. ಉದ್ಯೋಗಸ್ಥರಿಗೆ ಅರಸದೆ ಬರುವ ಅವಕಾಶಗಳು. ಸಿವಿಲ್ ಎಂಜಿನಿಯರರಿಗೆ ಅನುಕೂಲದ ದಿನ. ಕುಟುಂಬದೊಳಗೆ ಸಾಮರಸ್ಯ ಸ್ಥಾಪನೆ. ಗಣೇಶ ತ್ರಿಶತಿ ಸ್ತೋತ್ರ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ದೇವೀಸ್ತೋತ್ರ ಓದಿ.
ಕನ್ಯಾ:
ಪ್ರತಿಭೆ ಹಾಗೂ ಕಾರ್ಯನಿಷ್ಠೆಗೆ ಉನ್ನತರ ಮೆಚ್ಚುಗೆ.. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆಯ ಭರವಸೆ. ದೂರದೂರಿಗೆ ಪ್ರಯಾಣ ಮುಂದಕ್ಕೆ. ಅಧ್ಯಾಪಕರ ಆತಂಕ ನಿವಾರಣೆ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ. ಗಣೇಶ ಪಂಚರತ್ನ, ಆಂಜನೇಯ ಸ್ತೋತ್ರ, ಋಣಮೋಚನ ಮಂಗಳ ಸ್ತೋತ್ರ ಓದಿ.
ತುಲಾ:
ನಿಮ್ಮ ಕಾರ್ಯಕ್ಷೇತ್ರಕ್ಕೆ ನೀವೇ ಒಡೆಯರು.. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಶುಭಸೂಚನೆ. ಲೇವಾದೇವಿ ವ್ಯವಹಾರ ಬೇಡ. ಸಂಸಾರದಲ್ಲಿ ಹುಳಿ ಹಿಂಡುವವರಿಗೆ ಯೋಗ್ಯ ಪಾಠ. ಹಿರಿಯರ ಆಸ್ತಿ ಕಬಳಿಸುವ ಸ್ವಾರ್ಥಿಗಳಿಗೆ ಸೋಲು. ಗಣೇಶ ಪಂಚರತ್ನ, ಸತ್ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ವೃಶ್ಚಿಕ:
ವಿವಿಧ ಬಗೆಯ ವೃತ್ತಿಗಳವರಿಗೆ ಹಿತಾನುಭವ.. ಹೆಚ್ಚಿನ ಕ್ಷೇತ್ರಗಳ ಉದ್ಯೋಗಿಗಳಿಗೆ ಅನುಕೂಲ. ಸರ್ಕಾರಿ ಅಧಿಕಾರಿಗಳಿಗೆ ಪುಢಾರಿಗಳ ಕಾಟ. ಉನ್ನತ ರಾಜಕಾರಣಿಗಳಿಗೆ ಅಧಿಕಾರ ದಾಹ. ವಸ್ತ್ರ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಧನು:
ಪ್ರತಿಭೆ ಕೌಶಲ ಎರಡನ್ನು ಗುರುತಿಸುವ ಸಂದರ್ಭ.. ಉದ್ಯೋಗ ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಹಿರಿಯರ ಆರೋಗ್ಯದ ಕುರಿತು ಕಾಳಜಿ. ಗಣೇಶ ಪಂಚರತ್ನ, ಶಿವಸಹಸ್ರನಾಮ, ಲಕ್ಷ್ಮೀಸ್ತೋತ್ರ ಓದಿ.
ಮಕರ:
ಪ್ರಕೃತಿಯೊಂದಿಗೆ ಸಾಮರಸ್ಯ ಸಾಧಿಸುವ ಪ್ರಯತ್ನ.. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಬಂಧುವರ್ಗದಲ್ಲಿ ವೈಷಮ್ಯ ನಿವಾರಣೆ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ಮಕ್ಕಳನ್ನು ಸಾಕುಪ್ರಾಣಿಗಳಿಂದ ದೂರವಿಡಿ. ಗಣೇಶ ಅಷ್ಟಕ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.
ಕುಂಭ:
ಉದ್ಯೋಗಸ್ಥರಿಗೆ ಹಿತಾನುಭವ.. ಸರ್ಕಾರಿ ನೌಕರರಿಗೆ ತಾತ್ಕಾಲಿಕ ವಿರಾಮ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತೃಪ್ತಿಯ ಅನುಭವ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ. ಗಣೇಶ ಅಷ್ಟಕ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಅಧಿಕಾರಿಗಳಿಂದ ಸರ್ವವಿಧ ಸಹಾಯ.. ಎಲ್ಲ ಬಗೆಯ ಸೇವೆಗಳು ಅಬಾಧಿತ. ಸ್ವಂತ ಉದ್ಯಮ ಹೊಸ ರೂಪದಲ್ಲಿ ಆರಂಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಗೆ ಪ್ರಯತ್ನ ಅವಶ್ಯ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.