ದಕ್ಷಿಣ ಕನ್ನಡದಲ್ಲಿ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ: ಆಹಾರ ಸಾಮಗ್ರಿ ಸೀಜ್!

Dakshina Kannada: ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಸೂಚನೆಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಅನಿರೀಕ್ಷಿತ ದಾಳಿ ನಡೆಸಲಾಯಿತು.

Nov 17, 2026 - 20:32
Nov 17, 2026 - 20:32
ದಕ್ಷಿಣ ಕನ್ನಡದಲ್ಲಿ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ: ಆಹಾರ ಸಾಮಗ್ರಿ ಸೀಜ್!

ಮಂಗಳೂರು: ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಸೂಚನೆಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಅನಿರೀಕ್ಷಿತ ದಾಳಿ ನಡೆಸಲಾಯಿತು.

ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಸಿ.ಹೆಚ್ ಅವರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ, ಜಿಲ್ಲೆಯ ಹೋಟೆಲ್‌, ರೆಸ್ಟೋರೆಂಟ್‌, ಆಹಾರ ತಯಾರಿಕಾ ಘಟಕ ಮತ್ತು ಇನ್ನಿತರೇ ಆಹಾರ ಉದ್ಯಮಗಳನ್ನು ತಪಾಸಣೆ ಮಾಡಲಾಯಿತು.

ಕೊಲ್ಯದ ಐಡಿಯಲ್ ಕೋಲ್ಡ್ ಸ್ಟೋರೇಜ್ ಯುನಿಟ್‌ನಲ್ಲಿ ಐಸ್ ಕ್ರೀಮ್ ಶೇಖರಿಸುವ ಸಂದರ್ಭದಲ್ಲಿ ಪಾಲಿಸಬೇಕಾದ ಆಹಾರ ಸುರಕ್ಷತಾ ನಿಯಮಗಳ ಕುರಿತು ಪರಿಶೀಲನೆ ನಡೆಸಲಾಯಿತು. ಈ ವೇಳೆ ಕಂಡುಬಂದ ಲೋಪದೋಷಗಳ ಬಗ್ಗೆ ಘಟಕಕ್ಕೆ ನೋಟಿಸ್ ನೀಡಲಾಯಿತು.

ತೊಕ್ಕೊಟ್ಟು ಸಮೀಪದ ಸೇವಂತಿ ಗುಡ್ಡೆಯಲ್ಲಿರುವ ಎಂ.ಆರ್ ಸ್ವೀಟ್ಸ್ ಘಟಕದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ, ನೈರ್ಮಲ್ಯ ಕಾಪಾಡದೆ ಸಿಹಿತಿಂಡಿ ಹಾಗೂ ಇತರೆ ಆಹಾರ ಪದಾರ್ಥಗಳನ್ನು ತಯಾರಿಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆ ಆಹಾರ ಸಾಮಗ್ರಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡು ಸೀಜ್ ಮಾಡಿದರು.

ತಲಪಾಡಿಯ ಉಡುಪಿ ಕೆಫೆ ರೆಸ್ಟೋರೆಂಟ್‌ನ ಅಡುಗೆ ಮನೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಲಾಯಿತು. ಆಹಾರ ತಯಾರಿಸುವಾಗ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ, ಆಹಾರದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.