Dakshina Kannada ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಜು.24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Dakshina Kannada Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಜುಲೈ 24ರಂದು ಕೂಡ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Jul 24, 2026 - 00:58
Jul 24, 2026 - 09:56
Dakshina Kannada ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಜು.24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆ ಮುಂದುವರಿದಿರುವ ಹಿನ್ನಲೆ, ಇಂದು ಅಂದರೆ ಜು.24 ರಂದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ದರ್ಶನ್‌ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಭಾರೀ ಮಳೆಯ ಕಾರಣ ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ ಬಹುತೇಕ ಕಡೆ ಮಳೆ ಮುಂದುವರಿದಿರುವ ಹಿನ್ನಲೆ ಶುಕ್ರವಾರ ಕೂಡ ಜಿಲ್ಲೆಯ ಎಲ್ಲ ಅಂಗನವಾಡಿ, ಅನುದಾನಿತ & ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.