BREAKING: School-College Holiday Declared ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜುಲೈ 25ರಂದು ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Dakshina Kannada & Udupi ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಎಲ್ಲ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಮಂಗಳೂರು: ಭಾರೀ ಮಳೆ ಮುಂದುವರಿದಿರುವ ಹಿನ್ನಲೆ ನಾಳೆ ಅಂದರೆ ಜು.25ರಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ & ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಭಾರೀ ಮಳೆಯ ಕಾರಣ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ ಬಹುತೇಕ ಕಡೆ ಮಳೆ ಮುಂದುವರಿದಿರುವ ಹಿನ್ನಲೆ ಶನಿವಾರ ಕೂಡ ಜಿಲ್ಲೆಯ ಎಲ್ಲ ಅಂಗನವಾಡಿ, ಅನುದಾನಿತ&ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ, PU & ITI ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಅಂದರೆ ಗುರುವಾರ, ಶುಕ್ರವಾರವೂ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.
ಉಡುಪಿ ಜಿಲ್ಲೆಯಲ್ಲಿಯೂ ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಧಾರಾಕಾರ ಮಳೆಯಾಗುತ್ತಿದ್ದು, ನಾಳೆ ಅಂದರೆ ಜು.25 ರಂದು ಉಡುಪಿ ಜಿಲ್ಲೆಯಲ್ಲಿ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿರುವ ಹಿನ್ನಲೆ ಶನಿವಾರ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಅನುದಾನಿತ&ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ & ITI ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.