ದಸರಾ ಉದ್ಘಾಟನೆ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗೆ ಆಹ್ವಾನ
Dasara: ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರನ್ನು ದಸರಾ ಉದ್ಘಾಟಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕೃತವಾಗಿ ಆಹ್ವಾನಿಸಿದರು.
ಬೆಂಗಳೂರು: ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಶುರವಾಗಿದ್ದು, ಸಕಲ ಸಿದ್ಧತೆಗಳು ಜರುಗುತ್ತಿವೆ. ಈಗಾಗಲೇ ಗಜಪಡೆ ತಾಲೀಮು ಕೂಡ ನಡೆಯುತ್ತಿದೆ
ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರನ್ನು ದಸರಾ ಉದ್ಘಾಟಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕೃತವಾಗಿ ಆಹ್ವಾನಿಸಿದರು.
ಈ ಬಗ್ಗೆ 'ಎಕ್ಸ್'ನಲ್ಲಿಯೂ ಸಚಿವರು ಪೋಸ್ಟ್ ಮಾಡಿದ್ದಾರೆ. ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಒಪ್ಪಿರುವ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಇಂದು ಮಠದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದು, ಫಲಪುಷ್ಪ ನೀಡಿ ಗೌರವಪೂರ್ವಕವಾಗಿ ಆಹ್ವಾನಿಸಿದೆವು.
ನಾಡಿನ ಹೆಮ್ಮೆಯ ಮೈಸೂರು ದಸರಾ ಮಹೋತ್ಸವಕ್ಕೆ ಪೂಜ್ಯ ಶ್ರೀಗಳ ಸಾನ್ನಿಧ್ಯ ಹಾಗೂ ಆಶೀರ್ವಾದ ಮತ್ತಷ್ಟು ಮೆರುಗು, ಶೋಭೆ ಮತ್ತು ಪಾವಿತ್ರ್ಯವನ್ನು ನೀಡಲಿದೆ ಎಂದು ಬರೆದುಕೊಂಡಿದ್ದಾರೆ.
ಈ ವೇಳೆ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.