ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಗೆದ್ದ ದಿವ್ಯಾಗೆ ಡಿಸಿಎಂ ಡಾ.ಜಿ.ಪರಮೇಶ್ವರ ಅಭಿನಂದನೆ

DCM Dr.G.Parameshwara: ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಗೆದ್ದ ದಿವ್ಯಾ ಅವರನ್ನು ಡಿಸಿಎಂ ಡಾ.ಜಿ.ಪರಮೇಶ್ವರ ಅಭಿನಂದನೆ ಸಲ್ಲಿಸಿದ್ದಾರೆ.

Nov 14, 2026 - 12:55
Nov 14, 2026 - 12:55
ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಗೆದ್ದ ದಿವ್ಯಾಗೆ ಡಿಸಿಎಂ ಡಾ.ಜಿ.ಪರಮೇಶ್ವರ ಅಭಿನಂದನೆ

ಬೆಂಗಳೂರು: ದೋಹಾದಲ್ಲಿ ಇತ್ತೀಚೆಗೆ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನ 25 ಮೀ. ಪಿಸ್ತೂಲ್ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು, ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟು ದಿವ್ಯಾ ಟಿ.ಎಸ್ ಅವರನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸದಾಶಿವನಗರದ ತಮ್ಮ ಗೃಹಕಚೇರಿಯಲ್ಲಿ ಶನಿವಾರ ಅಭಿನಂದಿಸಿದರು.

ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವುದು ಸುಲಭದ ಸಾಧನೆಯಲ್ಲ. ದಿವ್ಯಾ ಅವರು ತಮ್ಮ ನಿರಂತರ ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ವಿಶ್ವಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿರುವುದು ಸಂತಸದ ಸಂಗತಿ. ಇದು ಕನ್ನಡಿಗರಿಗೆ ಹೆಮ್ಮೆ ತಂದುಕೊಟ್ಟಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ದಿವ್ಯಾ ಅವರ ಸಾಧನೆ ರಾಜ್ಯದ ಯುವ ಕ್ರೀಡಾಪಟುಗಳಿಗೆ, ವಿಶೇಷವಾಗಿ ಶೂಟಿಂಗ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಸ್ಫೂರ್ತಿಯಾಗಲಿ. ಪ್ರತಿಭೆಯ ಜೊತೆಗೆ ನಿರಂತರ ಅಭ್ಯಾಸ, ಕಠಿಣ ಪರಿಶ್ರಮ ಮತ್ತು ಸಾಧಿಸುವ ಛಲವಿದ್ದರೆ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಯಶಸ್ಸು ಗಳಿಸಬಹುದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. 

ಮುಂದಿನ ದಿನಗಳಲ್ಲಿಯೂ ದಿವ್ಯಾ ಅವರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಿ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲಲಿ. ಅವರ ಕ್ರೀಡಾ ಸಾಧನೆಯ ಪಯಣ ಹೀಗೆಯೇ ಮುಂದುವರಿಯಲಿ. ದೇಶ ಮತ್ತು ರಾಜ್ಯಕ್ಕೆ ಮತ್ತಷ್ಟು ಕೀರ್ತಿ ತರಲಿ ಎಂದು ಡಾ.ಜಿ.ಪರಮೇಶ್ವರ ಅವರು ಶುಭ ಹಾರೈಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.