Dr.G.Parameshwara: ಜಿಲ್ಲಾಧಿಕಾರಿಗಳೊಂದಿಗೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಡಿಸಿಎಂ

Dr.G.Parameshwara: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು, ಇಂದು ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

Sep 16, 2026 - 16:24
Dr.G.Parameshwara: ಜಿಲ್ಲಾಧಿಕಾರಿಗಳೊಂದಿಗೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಡಿಸಿಎಂ

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (Dr.G.Parameshwara) ಅವರು, ಇಂದು ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. 

ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯ ತ್ವರಿತಗೊಳಿಸಿ: 

ಭಾರತ್ ಜೋಡೋ ಯುವ ಸಂಘ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕನಸಿನ ಯೋಜನೆಯಾಗಿದೆ. ಸಂಘಗಳ ನೋಂದಣಿ, ಮೆಂಟರ್ಸ್‌ಗಳ ನೇಮಕ ಸೇರಿದಂತೆ ಸಂಘ ಪ್ರಾರಂಭಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆ, ಸ್ಥಗಿತಗೊಳಿಸಲಾಗಿತ್ತು. ಕೂಡಲೇ ಅರ್ಜಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿಸಬೇಕು. ಭಾರತ್ ಜೋಡೋ ಯುವಕ ಸಂಘ ಇಡೀ ದೇಶದಲ್ಲಿ ಮೊದಲ ಬಾರಿಗೆ ಜಾರಿಗೊಳಿಸುತ್ತಿರುವ ಕಾರ್ಯಕ್ರಮವಾಗಿದೆ. ಇದರಿಂದ ಸರ್ಕಾರ ಹಾಗೂ ಅಧಿಕಾರಿಗಳಿಗೆ ಒಳ್ಳೆ ಹೆಸರು ಬರಲಿದೆ ಎಂದು ಹೇಳಿದರು.

ಪ್ರಜಾಸೇವಾ ಅಭಿಯಾನದಲ್ಲಿ ಬರುವ ಅರ್ಜಿಗಳ ತ್ವರಿತ ವಿಲೇವಾರಿ ಮಾಡಿ: 

ಪ್ರಜಾಸೇವಾ ಅಭಿಯಾನದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬರುತ್ತಿವೆ‌. ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸಮಸ್ಯೆ ಸೇರಿದಂತೆ ಮುಂತಾದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಆರ್‌ಟಿಸಿ, ಪೋಡಿ ಪ್ರಕರಣಗಳನ್ನು ಸರಳೀಕರಣಗೊಳಿಸಲಾಗಿದೆ. ಆದಾಗ್ಯೂ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಬಡವರಿಗೆ ನಿವೇಶನ - ನಿರ್ಲಕ್ಷ್ಯ ಬೇಡ: 

ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ, ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಆಗಿಲ್ಲ. ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದ ವೇಳೆಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ನಿರ್ಲಕ್ಷಿಸುವುದು ಬೇಡ. ಹಿರಿಯ ಅಧಿಕಾರಿಗಳು ಟೆಕ್ನಿಕಲ್‌ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.

ಈ ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕಂದಾಯ ಆಯುಕ್ತ ಮೀನಾ ನಾಗರಾಜ್, ಭೂ ಮಾಪನ ಹಾಗೂ ಭೂ ದಾಖಲೆ‌ ಇಲಾಖೆಯ ಆಯುಕ್ತ ವೆಂಕಟರಾಜ್ ಸೇರಿದಂತೆ ಇತರರು ಇದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.