G.Parameshwara: ವಿದ್ಯಾನಗರ ಕ್ರೀಡಾ ಶಾಲೆಗೆ ಡಿಸಿಎಂ ಭೇಟಿ
G.Parameshwara: ಬೆಂಗಳೂರಿನ ವಿದ್ಯಾನಗರ ಕ್ರೀಡಾ ಶಾಲೆಗೆ ಡಿಸಿಎಂ ಡಾ.ಜಿ.ಪರಮೇಶ್ವರ ಭೇಟಿ ನೀಡಿದರು.
ಬೆಂಗಳೂರು: ಇಂದು ಚಿಕ್ಕಜಾಲದ ವಿದ್ಯಾನಗರದಲ್ಲಿರುವ 'ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ತರಬೇತಿ ಕೇಂದ್ರ'ಕ್ಕೆ (ವಿದ್ಯಾನಗರ ಕ್ರೀಡಾ ಶಾಲೆ) ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (G.Parameshwara) ಭೇಟಿ ನೀಡಿದರು. ಕ್ರೀಡಾಂಗಣ ಹಾಗೂ ವಿದ್ಯಾರ್ಥಿ ನಿಲಯದ ಮೂಲಸೌಕರ್ಯವನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕ್ರೀಡಾ ಆಯುಕ್ತ ಎಂ.ಎನ್.ಅನುಚೇತ್, ಜಯಪ್ರಕಾಶ್ ನಾರಾಯಣ್ ಹಾಗೂ ರಾಷ್ಟ್ರೀಯ ಯುವ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥ್ ಸ್ವಾಮಿ ಮುಂತಾದವರು ಇದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.