ಕ್ರೀಡಾಪಟುಗಳಿಗೆ ಹೊಸ ಸೈಕಲ್‌ ವಿತರಣೆ

Karnataka Bicycles Distribution: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಅತ್ಯಾಧುನಿಕ ಸೈಕಲ್‌ಗಳನ್ನು ಇಂದು (ಬುಧವಾರ) ವಿತರಿಸಲಾಯಿತು.

Jul 15, 2026 - 17:12
ಕ್ರೀಡಾಪಟುಗಳಿಗೆ ಹೊಸ ಸೈಕಲ್‌ ವಿತರಣೆ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಅತ್ಯಾಧುನಿಕ ಸೈಕಲ್‌ಗಳನ್ನು ಇಂದು (ಬುಧವಾರ) ವಿತರಿಸಲಾಯಿತು.  

ನೃಪತುಂಗ ರಸ್ತೆಯ ಯವನಿಕಾ ಸಭಾಂಗಣ ಮುಂಭಾಗ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಹೊಸ ಸೈಕಲ್‌ಗಳನ್ನು ಹಸ್ತಾಂತರಿಸಿದರು.

  

2025–26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ (ಎಸ್‌ಸಿಎಸ್‌ಪಿ) ವಿಜಯಪುರ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಕ್ರೀಡಾ ವಸತಿ ನಿಲಯಗಳಲ್ಲಿ ಸೈಕ್ಲಿಂಗ್ ತರಬೇತಿ ಪಡೆಯುತ್ತಿರುವ 35 ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ರೂ.2.52 ಕೋಟಿ ವೆಚ್ಚದಲ್ಲಿ ಈ ಸೈಕಲ್‌ಗಳನ್ನು ಖರೀದಿಸಲಾಗಿದೆ. 

ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕ್ರೀಡಾ ಇಲಾಖೆಯ ಆಯುಕ್ತ ಎಂ.ಎನ್. ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.