Dr.G.Parameshwara: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆಸ್ಪತ್ರೆಗೆ ದಾಖಲು

Dr.G.Parameshwara: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Oct 27, 2026 - 14:58
Oct 27, 2026 - 14:58
Dr.G.Parameshwara: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆಸ್ಪತ್ರೆಗೆ ದಾಖಲು

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (Dr.G.Parameshwara) ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿನ ವೈದ್ಯರು ಆರೋಗ್ಯ ಸ್ಥಿತಿಯನ್ನು ತೀವ್ರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

'ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್-2026' ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೇಳೆ,  ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ. 

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಯು.ಟಿ.ಖಾದರ್‌ ಹಾಗೂ ಪ್ರಿಯಾಂಕ್‌ ಖರ್ಗೆ ಆಸ್ಪತ್ರೆಗೆ ಭೇಟಿ ನೀಡಿ, ಪರಮೇಶ್ವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. 

ಈ ವೇಳೆ ಆರೋಗ್ಯ ಸಚಿವ ಯು.ಟಿ.ಖಾದರ್‌ ಮಾತನಾಡಿ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.