ತಿಮ್ಮಪ್ಪ ದೇಗುಲಕ್ಕೆ 160 ಕೋಟಿ ಮೌಲ್ಯದ 121 ಕೆಜಿ ಚಿನ್ನಾಭರಣ ದೇಣಿಗೆ

Tirumala Temple: ಉದ್ಯಮಿ ವರ್ಧಮಾನ್ ಜೈನ್, ಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲದ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ರೂ.160 ಕೋಟಿ ಮೌಲ್ಯದ 121 ಕೆಜಿ ಚಿನ್ನಾಭರಣವನ್ನು ದೇಣಿಗೆಯಾಗಿ ನೀಡಿದ್ದಾರೆ.

Nov 26, 2026 - 17:39
Nov 26, 2026 - 17:56
ತಿಮ್ಮಪ್ಪ ದೇಗುಲಕ್ಕೆ 160 ಕೋಟಿ ಮೌಲ್ಯದ 121 ಕೆಜಿ ಚಿನ್ನಾಭರಣ ದೇಣಿಗೆ

ತಿರುಪತಿ: ಚೆನ್ನೈ ಮೂಲದ ಉದ್ಯಮಿ ವರ್ಧಮಾನ್ ಜೈನ್ ಅವರು, ಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲದ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ರೂ.160 ಕೋಟಿ ಮೌಲ್ಯದ 121 ಕೆಜಿ ಚಿನ್ನಾಭರಣವನ್ನು ದೇಣಿಗೆಯಾಗಿ ನೀಡಿದ್ದಾರೆ. 

ಗುರುವಾರ ದೇವಸ್ಥಾನಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ಈ ಚಿನ್ನಾಭರಣಗಳನ್ನು ಹಸ್ತಾಂತರಿಸಿದ್ದಾರೆ. 

ದೇವರ ಅಲಂಕಾರಕ್ಕಾಗಿ ಕಿರೀಟ, ತೋಳುಬಂದಿಗಳು, ಭುಜಾಭರಣಗಳು, ಸೊಂಟದ ಪಟ್ಟಿ ಮತ್ತು ಪಾದಾಭರಣಗಳು ಸೇರಿದಂತೆ ಒಟ್ಟು 45 ಬಗೆಯ ಆಭರಣಗಳನ್ನು ಸಮರ್ಪಿಸಿದ್ದಾರೆ.

ಜಿಆರ್‌ಟಿ ಜ್ಯುವೆಲರ್ಸ್‌ನ ಕುಶಲಕರ್ಮಿಗಳು 15 ತಿಂಗಳ ಕಾಲ ಚಿನ್ನಾಭರಣವನ್ನು ತಯಾರಿಸಿದ್ದಾರೆ. ಶುಕ್ರವಾರ ದೇವಾಲಯದ ಅರ್ಚಕರು, ಈ ಆಭರಣಗಳಿಂದ ದೇವರನ್ನು ಅಲಂಕರಿಸುವ ನಿರೀಕ್ಷೆಯಿದೆ.

ವರ್ಧಮಾನ್ ಜೈನ್ ಸದ್ಯ 'ಆಕ್ಸೆಸ್ ಹೆಲ್ತ್‌ಕೇರ್' (Access Healthcare) ಸಂಸ್ಥೆಯ ಸ್ಥಾಪಕ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.