District-level Chess Tournament: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

District-level Chess Tournament: ಶಾಲಾ ಶಿಕ್ಷಣ ಇಲಾಖೆ (ಪದವಿ-ಪೂರ್ವ) ಮತ್ತು ಮಂಗಳೂರಿನ ಪದುವಾ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ, ಈಚೆಗೆ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ ನಡೆಯಿತು.

Sep 17, 2026 - 15:30
District-level Chess Tournament: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ: ಶಾಲಾ ಶಿಕ್ಷಣ ಇಲಾಖೆ (ಪದವಿ-ಪೂರ್ವ) ಮತ್ತು ಮಂಗಳೂರಿನ ಪದುವಾ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ, ಈಚೆಗೆ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ ನಡೆಯಿತು. ಇಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಗೆ ಭಾಜನವಾಗಿದೆ.

ಈ ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಸ್ಪೂರ್ತಿ ಜಿ ಬಲ್ಲಾಲ್, ಸ್ವಪ್ನ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅನನ್ಯ ಎಸ್, ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಎ.ಶ್ರೀದೇವಿ ಭಟ್ ಭಾಗವಹಿಸಿದ್ದರು. ಹಾಗೆಯೇ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನ್ವಿ ಚನಿಲ, 5ನೇ ಸ್ಥಾನ  ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಅವರ ನೇತೃತ್ವದಲ್ಲಿ ತರಬೇತಿಯನ್ನು ನೀಡಲಾಗಿದೆ. ಇವರುಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.