ಜಿಲ್ಲಾ ಮಟ್ಟದ ಚೆಸ್ ಟೂರ್ನಿ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

District Level Chess Tournament: ಜಿಲ್ಲಾ ಮಟ್ಟದ ಚೆಸ್ ಟೂರ್ನಿಯಲ್ಲಿ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

Aug 27, 2026 - 13:30
ಜಿಲ್ಲಾ ಮಟ್ಟದ ಚೆಸ್ ಟೂರ್ನಿ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: 3ನೇ ಜಿಲ್ಲಾ ಮಟ್ಟದ 'ವಿವೇಕಾನಂದ ಜೂನಿಯರ್ ಚೆಸ್ ಟೂರ್ನಿ' ವಿವೇಕಾನಂದ ಪದವಿ ಕಾಲೇಜಿನಲ್ಲಿ ಈಚೆಗೆ ನಡೆಯಿತು. 

ಈ ಪಂದ್ಯಾವಳಿಯಲ್ಲಿ ವಿವೇಕಾನಂದ  ಪದವಿ-ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಬ್ರಿಜೇಶ್ 3ನೇ ಸ್ಥಾನ, ಕಲಾ ವಿಭಾಗದ ಶ್ರೀದೇವಿ ಭಟ್ 6ನೇ ಸ್ಥಾನ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ರಿಶನ್ ಬಿ 7ನೇ ಸ್ಥಾನ ಹಾಗೂ ಕಿಶನ್ ಬಡಿಕ್ಕಿಲ 8ನೇ ಸ್ಥಾನವನ್ನು ಪಡೆದಿದ್ದಾರೆ. 

ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಅವರುಗಳು ಈ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.