ಜಿಲ್ಲಾ ಮಟ್ಟದ ಫುಟ್‌ಬಾಲ್‌ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡ ಪ್ರಥಮ

Vivekananda PU College: ಈಚೆಗೆ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ.

Sep 11, 2026 - 19:04
ಜಿಲ್ಲಾ ಮಟ್ಟದ ಫುಟ್‌ಬಾಲ್‌ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡ ಪ್ರಥಮ

ಪುತ್ತೂರು: ವಿವೇಕಾನಂದ ಪದವಿ-ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಈಚೆಗೆ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ, ಇದೇ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ. 

ಈ ತಂಡವನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧ್ಯಾನೇಶ್ ಎಸ್, ರಿಥನ್ ಗೌಡ ಎಸ್, ಶ್ರೀಶಾಂತ್, ಮೋಹಿತ್ ಬಿ.ಕೆ, ಅಭಯ್, ದೈವಿಕ್ ದರ್ಶನ್ ಡಿ.ವಿ, ಪವನ್ ಕುಮಾರ್ ಟಿ, ಲೋಕೇಶ್ ಕೆ.ಜಿ, ತಸ್ಮೈ ಪಿ ಗೌಡ, ಭುವನ್ ಗೌಡ ಜಿ.ಎನ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ವಂಶಿಕ್ ಸಿ.ಆರ್, ನಿಹಾನ್ ಶೆಟ್ಟಿ ವಿ.ಆರ್, ಉಜ್ವಲ್ ಮನೋಜ್ ತಾರಾ, ಚಿರಾಗ್ ಜಿ.ಯು, ಪವನ್ ವಿ.ವಿ, ವಿಲಾಸ್ ಬಿ.ಜಿ, ಗಗನ್ ಸಿ.ಎನ್, ಶ್ರೀಶಾಂತ್ ಎಸ್ ಪ್ರತಿನಿಧಿಸಿದ್ದರು.

ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಅವರು, ಈ ತಂಡಕ್ಕೆ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.