ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಶಸ್ತಿ

District-level Karate Tournament: ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಪ್ರಶಸ್ತಿಗಳನ್ನು ಜಯಿಸಿದ್ದಾರೆ.

Oct 13, 2026 - 16:56
ಜಿಲ್ಲಾ ಮಟ್ಟದ ಕರಾಟೆ  ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಪುತ್ತೂರು: ತುಂಬೆಯಲ್ಲಿ 'ಶಾಲಾ ಶಿಕ್ಷಣ ಇಲಾಖೆ' ಪದವಿಪೂರ್ವ ವಿಭಾಗದ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಪ್ರಶಸ್ತಿಗಳನ್ನು ಜಯಿಸಿದ್ದಾರೆ. 

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಖುಷಿ (44 ಕೆಜಿ) ಹಾಗೂ ದ್ರಿಶ್ಯ (68 ಕೆಜಿ) ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಾನ್ವಿ (68 ಕೆಜಿ) ಕಂಚಿನ ಪದಕವನ್ನು ಪಡೆದಿದ್ದಾರೆ. 

ಹಾಗೆಯೇ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಘನಶ್ಯಾಮ್ (50 ಕೆಜಿ) ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 

ಇವರುಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಅವರು ತರಬೇತಿಯನ್ನು ನೀಡಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.