ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ: ವಿವೇಕನಂದ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರಮಟಕ್ಕೆ ಆಯ್ಕೆ
District Level Karate Tournament: ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕನಂದ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ.ಎಂ ಪ್ರಥಮ ಸ್ಥಾನ ಪಡೆದಿದ್ದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಬೆಂಗಳೂರಿನ ಜೈ ಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಇತ್ತೀಚೆಗೆ 'ವಿದ್ಯಾಭಾರತಿ' ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ನಡೆಯಿತು. 44 ಕೆಜಿ ವಿಭಾಗದಲ್ಲಿ ವಿವೇಕನಂದ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ.ಎಂ ಮೊದಲ ಸ್ಥಾನ ಪಡೆದಿದ್ದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಅವರು ತರಬೇತಿ ನೀಡಿದ್ದಾರೆ. ಈಕೆಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.