ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ

Vivekananda PU College: ಪುಣಚದ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

Aug 17, 2026 - 15:58
Aug 17, 2026 - 15:59
ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ

ಪುತ್ತೂರು: ಪುಣಚದ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಈ ಪಂದ್ಯಾವಳಿಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಖುಷಿ ಕೆ.ಎಂ ಚಿನ್ನದ ಪದಕಕ್ಕೆ ಭಾಜನರಾಗಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

  

ಪ್ರಥಮ ಪಿಯುಸಿ ಕಲಾವಿಭಾಗದ ಪ್ರೀತೇಶ್, ವಾಣಿಜ್ಯ ವಿಭಾಗದ ಅಭಯ್ ಎಸ್ ರಾವ್ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಯಜ್ಞ ಬೆಳ್ಳಿ ಪದಕವನ್ನು ಜಯಿಸಿದ್ದಾರೆ. ಅದೇ ರೀತಿಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಕ್ಷಯ್ ಬಿ.ಟಿ ಮತ್ತು ಸಾನ್ವಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ತರಬೇತಿ ನೀಡಿದ್ದಾರೆ. ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.