ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

Vivekananda PU College: ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

Nov 15, 2026 - 12:00
Nov 14, 2026 - 22:01
ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

ಪುತ್ತೂರು: ಮಾಲೆಮಾರ್ ಎಸ್ಟೇಟ್‌ನಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ಈಚೆಗೆ ನಡೆದ ಶಾಲಾ ಶಿಕ್ಷಣ ಇಲಾಖೆಯ ಪದವಿ-ಪೂರ್ವ ವಿಭಾಗದ 'ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ'ಯಲ್ಲಿ, ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ. 

ದ್ವಿತೀಯ ವಾಣಿಜ್ಯ ವಿಭಾಗದ ಮನ್ಮಿತಾ ಹಾಗೂ ವಿಜ್ಞಾನ ವಿಭಾಗದ ಆತ್ಮಿಕಾ ಈ ತಂಡವನ್ನು ಪ್ರತಿನಿಧಿಸಿದ್ದರು. ಈ ಪೈಕಿ ಮನ್ಮಿತಾ, ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. 

ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ತರಬೇತಿ ಪಡೆದಿದ್ದರು. 

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.