ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್: ವಿವೇಕಾನಂದ ಪಿಯು ಕಾಲೇಜು ವಿದ್ಯಾರ್ಥಿಗಳ ತಂಡ ರಾಜ್ಯಮಟ್ಟಕ್ಕೆ
District Level Table Tennis: ಮಂಗಳೂರಿನ ಶಕ್ತಿ ಪಿಯು ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ.
ಪುತ್ತೂರು: ಮಂಗಳೂರಿನ ಶಕ್ತಿ ಪಿಯು ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ಈ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ತಂಡವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಹೆಚ್.ಮನ್ವಿತಾ, ಶರಣ್ಯ ಹೆಚ್.ಎನ್, ಆಶ್ರಿಕಾ ಹಾಗೂ ಬಾಲಕರ ತಂಡವನ್ನು ಪ್ರಥಮ ಪಿಯುಸಿ ವಿದ್ಯಾರ್ಥಿ ಕೆ.ವಿ.ನಿಖಿಲ್ ಕುಮಾರ್, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆರ್ಯರಮಣ ಕೆ.ಆರ್, ಅಭಿಲಾಷ್ ಬಿ, ವಿಕ್ರಮ್ ಎ.ಜಿ ಪ್ರತಿನಿಧಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ತರಬೇತಿ ನೀಡಿದರು.
ಈ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.