ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ: ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡ ಪ್ರಥಮ

Vivekananda PU College: ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ, ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿದೆ.

Aug 27, 2026 - 17:18
Aug 27, 2026 - 20:21
ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ: ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡ ಪ್ರಥಮ

ಪುತ್ತೂರು: ವಿದ್ಯಾಭಾರತಿ 'ಜಿಲ್ಲಾಮಟ್ಟದ ಯೋಗ ಸ್ಪರ್ಧೆ' ಕೆಪಿಎಸ್ ಶಾಲೆ ಪಂಜಿನಡ್ಕ ಮುಲ್ಕಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ  ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ, ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಮನ್ವಿತ್ ರಿಥಮಿಕ್‌ನಲ್ಲಿ ಪ್ರಥಮ ಬಹುಮಾನಕ್ಕೆ ಪಾತ್ರರಾಗಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸೃಜನ್ ರಿಥಮಿಕ್‌ನಲ್ಲಿ ಪ್ರಥಮ, ರಿತೇಶ್ ಯಜ್ಞ ಆರ್ಟಿಸ್ಟಿಕ್‌ನಲ್ಲಿ ದ್ವಿತೀಯ, ಸ್ಕಂದ ಬಲ್ಲಕ್ಕುರಾಯ ಟ್ರಡಿಷನಲ್‌ನಲ್ಲಿ ಪ್ರಥಮ ಹಾಗೂ ಲೀಕ್ಷಿತ್ ಟ್ರಡಿಷನಲ್‌ನಲ್ಲಿ ದ್ವಿತೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ತರಬೇತಿ ನೀಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.