ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ!
Yoga Competition: ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.
ಪುತ್ತೂರು: ಮುಲ್ಕಿಯ ಪಂಜಿನಡ್ಕದ ಕೆಪಿಎಸ್ ಶಾಲೆಯಲ್ಲಿ ಈಚೆಗೆ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ ನಡೆಯಿತು. ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.
ರಿದಮಿಕ್ ಯೋಗ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಮನ್ವಿತ್, ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದೆ. ಇದೇ ರಿದಮಿಕ್ ಯೋಗ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸೃಜನ್ ಕೂಡ ಪ್ರಥಮ ಸ್ಥಾನ ಪಡೆಯುವಲ್ಲಿ ಸಫಲರಾದರು.
ಆರ್ಟಿಸ್ಟಿಕ್ ಯೋಗ ವಿಭಾಗದಲ್ಲಿ ವಿದ್ಯಾರ್ಥಿಗಳಾದ ರಿತೇಶ್ ಹಾಗೂ ಯಜ್ಞ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಟ್ರಡಿಷನಲ್ ಯೋಗ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಸ್ಕಂದ ಬಲ್ಲಕ್ಕುರಾಯ ಹಾಗೂ ಲೀಕ್ಷಿತ್ ದ್ವಿತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು.
ಇವರುಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಅವರು ತರಬೇತಿಯನ್ನು ನೀಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.