ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
District-level Yoga Competition: ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿಗೆ ಭಾಜನವಾಗಿದೆ.
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ & ಉಪ ನಿರ್ದೇಶಕ ಕಚೇರಿ ಮಂಗಳೂರು ಇವರ ಸಹಯೋಗದಲ್ಲಿ, ಈಚೆಗೆ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿಗೆ ಭಾಜನವಾಗಿದೆ.
ಆರ್ಟಿಸ್ಟಿಕ್ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಮನ್ವಿತ್ ಹಾಗೂ ಶೃಜನ್ ರೈ ಭಾಗವಹಿಸಿದ್ದರು. ಹಾಗೆಯೇ ಟ್ರಡಿಷನಲ್ ವಿಭಾಗದಲ್ಲಿ ವಿದ್ಯಾರ್ಥಿ ಸ್ಕಂದ ಬಲ್ಲಕ್ಕುರಾಯ ಪಾಲ್ಗೊಂಡಿದ್ದರು.
ಇವರುಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಅವರುಗಳು ತರಬೇತಿಯನ್ನು ನೀಡಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.