ದೀಪಾವಳಿ: ಯಶವಂತಪುರ-ಮಡಗಾಂವ್-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ
Diwali: ದೀಪಾವಳಿ ಅಂಗವಾಗಿ ಯಶವಂತಪುರ-ಮಡಗಾಂವ್-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಮಾಡಲಿದೆ.
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ ಮತ್ತು ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸೇವೆಗಳನ್ನು ಒದಗಿಸಲಿದೆ. ಪ್ರತಿ ಮಾರ್ಗದಲ್ಲಿಯೂ ತಲಾ ಒಂದು ಪ್ರಯಾಣ (ಟ್ರಿಪ್) ಇರಲಿದೆ.
ರೈಲು ಸಂಖ್ಯೆ 06591 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್’ಪ್ರೆಸ್ ರೈಲು, 2026ರ ನ.6 ಶುಕ್ರವಾರದಂದು ರಾತ್ರಿ 11:55 ಗಂಟೆಗೆ ಯಶವಂತಪುರದಿಂದ ಹೊರಟು, ನ.7 ಶನಿವಾರದಂದು ಸಂಜೆ 6:10 ಗಂಟೆಗೆ ಮಡಗಾಂವ್ ತಲುಪಲಿದೆ.
ರೈಲು ಸಂಖ್ಯೆ 06592 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್’ಪ್ರೆಸ್ ರೈಲು, ನ.8 ಭಾನುವಾರದಂದು ರಾತ್ರಿ 11 ಗಂಟೆಗೆ ಮಡಗಾಂವ್ ರೈಲು ನಿಲ್ದಾಣದಿಂದ ಹೊರಟು, ನ.9, ಸೋಮವಾರದಂದು ಸಂಜೆ 5:20 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್'ಗೆ ಬರಲಿದೆ.
ಎಲ್ಲಿ ನಿಲುಗಡೆ: ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ-ಪುತ್ತೂರು, ಬಂಟವಾಳ, ಮಂಗಳೂರು ಜಂಕ್ಷನ್, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಹಾಗೂ ಕಣಕೋಣ.
ಮರು ಪ್ರಯಾಣದ ವೇಳೆ ರೈಲು ಸಂಖ್ಯೆ 06592 ಯಶವಂತಪುರದಲ್ಲಿ ನಿಲುಗಡೆಯನ್ನು ಹೊಂದಿರುವುದಿಲ್ಲ. ಆದಾಗ್ಯೂ, ಎಸ್ಎಂವಿಟಿ ಬೆಂಗಳೂರಿನಲ್ಲಿ ನಿಲುಗಡೆಗೊಳ್ಳಲಿದೆ.
ಈ ವಿಶೇಷ ರೈಲಿನಲ್ಲಿ ಒಟ್ಟು 19 ಬೋಗಿಗಳಿರಲಿದ್ದು, ಇದರಲ್ಲಿ ಎಸಿ, ಸ್ಲೀಪರ್ ಕ್ಲಾಸ್ ಮತ್ತು ಜನರಲ್ ಕ್ಲಾಸ್ ಮತ್ತು ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳೊಂದಿಗೆ, ದಿವ್ಯಾಂಗಚೇತನರಿಗಾಗಿ ಮೀಸಲಾದ ಬೋಗಿಯೂ ಇರಲಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.