ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಯೇ ಅಸಮರ್ಪಕ: ಈಶ್ವರ ಖಂಡ್ರೆ

Eshwara Khandre: ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಯೇ ಅಸಮರ್ಪಕ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

Sep 9, 2026 - 17:31
Sep 9, 2026 - 17:32
ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಯೇ ಅಸಮರ್ಪಕ: ಈಶ್ವರ ಖಂಡ್ರೆ
ಚಿತ್ರಕೃಪೆ @ Deccan Herald

ಬೆಂಗಳೂರು: ಬರ ಪೀಡಿತ ಪ್ರದೇಶ ಘೋಷಣೆಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಗಳೇ ಅಸಮರ್ಪಕವಾಗಿದ್ದು, ಇದನ್ನು ಬದಲಾಯಿಸುವಂತೆ ಒತ್ತಾಯಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ (Eshwara Khandre) ಹೇಳಿದ್ದಾರೆ.

ರಾಜ್ಯದಲ್ಲಿ 2026ರ ಮುಂಗಾರು, ಬರ ಪರಿಸ್ಥಿತಿ & ಇತರ ನೈಸರ್ಗಿಕ ವಿಕೋಪ ಪರಿಸ್ಥಿತಿಗಳ ಪರಾಮರ್ಶೆ ಮತ್ತು ಸಮರ್ಥವಾಗಿ ನಿಭಾಯಿಲು ನೀತಿ ನಿರೂಪಣೆ - ಅಗತ್ಯ ಕ್ರಮಗಳ ಬಗ್ಗೆ ನಿರ್ಣಯಿಸುವ ಕುರಿತಂತೆ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ಅವರು ಈ ಸಲಹೆ ನೀಡಿದರು.

ಈಗಾಗಲೇ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಲಾಗಿದೆ. ಆದರೂ, ಅದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೀಗಾಗಿ ಅಂಶವಾರು ಬದಲಾವಣೆಗೆ ಪತ್ರ ಬರೆದು ಒತ್ತಾಯಿಸಬೇಕು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಗಳ ಪ್ರಕಾರ, ರಾಜ್ಯದ ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಲು ಕೇವಲ ಮಳೆ ಕೊರತೆಯಷ್ಟೇ ಅಲ್ಲದೆ, ಉಪಗ್ರಹ ಆಧಾರಿತ ಸೂಚ್ಯಂಕಗಳನ್ನು ಕಡ್ಡಾಯವಾಗಿ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಅಲ್ಪ ಮಳೆಯಾಗಿ ಬೆಳೆ ಕಾಳು ಕಚ್ಚದಿದ್ದರೂ ಬಿತ್ತನೆ ಆಧಾರದಲ್ಲಿ ನಿರಾಕರಿಸಲಾಗುತ್ತದೆ ಇದು ಸರಿಯಲ್ಲ ಎಂದರು.

ಉಪಸಮಿತಿ ಸಭೆಯಲ್ಲಿ ಸಚಿವರಾದ ಲಕ್ಷ್ಮಣ ಸವದಿ ಹಾಗೂ ಪುಟ್ಟರಂಗಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.