Earthquake: ವಿಜಯಪುರದಲ್ಲಿ ಮತ್ತೆ ಭೂಕಂಪ

Earthquake: ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 2:04ರ ಸುಮಾರಿಗೆ 3.5 ತೀವ್ರತೆಯಲ್ಲಿ ಮತ್ತೆ ಭೂಕಂಪವಾಗಿದೆ.

Sep 30, 2026 - 12:25
Earthquake: ವಿಜಯಪುರದಲ್ಲಿ ಮತ್ತೆ ಭೂಕಂಪ

Earthquake: ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 2:04ರ ಸುಮಾರಿಗೆ 3.5 ತೀವ್ರತೆಯಲ್ಲಿ ಮತ್ತೆ ಭೂಕಂಪವಾಗಿದೆ. ಈ ಬಗ್ಗೆ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ. 

ಬಸವನ ಬಾಗೇವಾಡಿಯಿಂದ ಈಶಾನ್ಯ ದಿಕ್ಕಿನಲ್ಲಿ 3.9 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಭೂಮಿಯ 10 ಕಿ.ಮೀ ಆಳದಲ್ಲಿ ಕಂಪನವು ದಾಖಲಾಗಿದೆ. 

ಕೇಂದ್ರ ಬಿಂದುವಿನಿಂದ 50-60 ಕಿ.ಮೀ ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿರುವ ಸಾಧ್ಯತೆಯಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ. 

ವಿಜಯಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿ 12.26ಕ್ಕೂ ಭೂಕಂಪವಾಗಿತ್ತು. 3.5 ತೀವ್ರತೆ ದಾಖಲಾಗಿತ್ತು. ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮ ಪಂಚಾಯಿತಿಯಿಂದ 1.1 ಕಿ.ಮೀ. ನೈಋತ್ಯಕ್ಕೆ ಭೂಕಂಪದ ಕೇಂದ್ರ ಬಿಂದುವನ್ನು ಗುರುತಿಸಲಾಗಿತ್ತು.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.