Ramanath Rai ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Ramanath Rai: ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ: ಮಾಜಿ ಸಚಿವ ರಮಾನಾಥ ರೈ (Ramanath Rai) ಅವರು, ಪ್ರಯಾಣಿಸುತ್ತಿದ್ದ ಕಾರಿಗೆ, ಕಾರ್ಕಳ ಸಮೀಪ ಸಾಣೂರಿನಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿಕೊಂಡಿದ್ದ ರಮಾನಾಥ ರೈ ಅವರನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯಕ್ಕೆ ರಮಾನಾಥ ರೈ, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿಯಾಗಿದೆ. ಅವರು ಮೂಡುಬಿದ್ರೆಯಿಂದ ಕಾರ್ಕಳ ತಾಲೂಕಿನ ಬಜಗೋಳಿಗೆ ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದರು. ಚಾಲಕ ಹಾಗೂ ಆಪ್ತ ಸಹಾಯಕ ಕೂಡ ಗಾಯಗೊಂಡಿದ್ದಾರೆ.
ಇನ್ನು, ಬಸ್‌ನಲ್ಲಿ ತೆರಳುತ್ತಿದ್ದ 6 ಮಂದಿ ಪ್ರಯಾಣಿಕರಿಗೂ ಗಾಯಗಳಾಗಿವೆ.