ಅಂಗನವಾಡಿ ಕಾರ್ಯಕರ್ತರ ಮನವಿ: ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸರಕಾರ ಸ್ಪಂದಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಬುಧವಾರ ಸಂಘಟನೆಯ ಮುಖಂಡರು ಬೆಂಗಳೂರಿನ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.
ಮನವಿಯನ್ನು ಸ್ವೀಕರಿಸಿದ ಸಚಿವರು, ಇಲಾಖಾ ಹಂತದಲ್ಲಿರುವ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು, ಉಳಿದ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ಎಂ.ಎಸ್. ಅರ್ಚನಾ ಹಾಗೂ ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್ ಉಪಸ್ಥಿತರಿದ್ದರು.