Kangana Ranaut: ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲು

Kangana Ranaut: ಹಿಮಾಚಲ ಪ್ರದೇಶದ ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Nov 14, 2026 - 10:45
Nov 14, 2026 - 11:00
Kangana Ranaut: ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲು
ಚಿತ್ರಕೃಪೆ: The Economic Times

ಶಿಮ್ಲಾ: ಗಾಂಧಿ ಕುಟುಂಬವನ್ನು ಗುರಿಯಾಗಿಸಿಕೊಂಡು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಹಿಮಾಚಲ ಪ್ರದೇಶದ ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 196 (ದ್ವೇಷಕ್ಕೆ ಪ್ರಚೋದನೆ), 353 (ಸಾರ್ವಜನಿಕ ದುಷ್ಕೃತ್ಯಕ್ಕೆ ಕಾರಣವಾಗುವ ಹೇಳಿಕೆಗಳು) ಹಾಗೂ 356 (ಮಾನನಷ್ಟ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 

ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಸಿಂಗ್ ಶುಕ್ರವಾರ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 

ಅತುಲ್ ಶರ್ಮಾ ಎಂಬುವವರು ನೀಡಿದ ದೂರಿನ ಅನ್ವಯ ಈ ಎಫ್‌ಐಆರ್ ದಾಖಲಾಗಿದೆ. ಅವರ ಪೋಸ್ಟ್‌ಗಳಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಸಾವಿನ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳಿವೆ ಎಂದು ಆರೋಪಿಸಲಾಗಿದೆ.

ರನೌತ್ ಅವರ ಪೋಸ್ಟ್‌ವೊಂದರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು 'ನಿಗೂಢ ವಿದೇಶಿ ಪ್ರಜೆ' ಎಂದಿದ್ದಾರೆ. ಅವರ ಸಂಬಂಧಿಕರು ಒಬ್ಬರ ನಂತರ ಒಬ್ಬರಂತೆ ಸಾವನ್ನಪ್ಪಿದ್ದು, ಇದು ಅವರು ಸರ್ಕಾರ ಮುಖ್ಯಸ್ಥರಾಗಲು ಅಂತಿಮವಾಗಿ ದಾರಿ ಮಾಡಿಕೊಟ್ಟಿತು ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ. 

ಈ ಪೋಸ್ಟ್‌ಗಳು ರಾಜಕೀಯ ಟೀಕೆಗಳನ್ನು ಮೀರಿದ್ದು, ಪ್ರಚೋದನಕಾರಿಯಾಗಿವೆ ಎಂದು ಶರ್ಮಾ ಆರೋಪ ಮಾಡಿದ್ದಾರೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.