ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್: 7 ಬ್ಯಾಟ್ಸ್‌ಮನ್, 4 ವೇಗಿಗಳೊಂದಿಗೆ ಕಣಕ್ಕಿಳಿಯಲಿದೆ ಭಾರತ

IND vs NL: ನ್ಯೂಜಿಲೆಂಡ್ ವಿರುದ್ಧ ನ.19 ರಂದು ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ, ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ತಂಡದ ಆಟಗಾರರ ಸಂಯೋಜನೆಯನ್ನು ಖಚಿತಪಡಿಸಿದ್ದಾರೆ.

Nov 17, 2026 - 13:12
Nov 17, 2026 - 13:12
ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್: 7 ಬ್ಯಾಟ್ಸ್‌ಮನ್, 4 ವೇಗಿಗಳೊಂದಿಗೆ ಕಣಕ್ಕಿಳಿಯಲಿದೆ ಭಾರತ

IND vs NL: ನ್ಯೂಜಿಲೆಂಡ್ ವಿರುದ್ಧ ನ.19 ರಂದು ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ, ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ತಂಡದ ಆಟಗಾರರ ಸಂಯೋಜನೆಯನ್ನು ಖಚಿತಪಡಿಸಿದ್ದಾರೆ. 

ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತದ ಏಳು ಬ್ಯಾಟ್ಸ್‌ಮನ್‌ಗಳು ಮತ್ತು ನಾಲ್ವರು ವೇಗದ ಬೌಲರ್‌ಗಳೊಂದಿಗೆ ಕಣಕ್ಕಿಳಿಯಲಿದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ನ್ಯೂಜಿಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿಗಳನ್ನು ಗೆದ್ದಿರುವ ಭಾರತ, ಸದ್ಯ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ಸಂಭಾವ್ಯ ಪ್ಲೇಯಿಂಗ್ 11:

ಭಾರತ: ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ದೇವದತ್ ಪಡಿಕ್ಕಲ್, ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್/ ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್/ ಅಂಶುಲ್ ಕಾಂಬೋಜ್, ಆಕಾಶ್ ದೀಪ್/ ಗುರ್ನೂರ್ ಬ್ರಾರ್, ಜಸ್‌ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್/ ಪ್ರಸಿದ್ಧ್ ಕೃಷ್ಣ. 

ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೆ, ವಿಲ್ ಯಂಗ್, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಾಮ್ ಬ್ಲಂಡೆಲ್, ಮಿಚೆಲ್ ಸ್ಯಾಂಟ್ನರ್, ಕೈಲ್ ಜೇಮೀಸನ್, ಮ್ಯಾಟ್ ಹೆನ್ರಿ ಮತ್ತು ಜೇಕಬ್ ಡಫಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.