ಸುರತ್ಕಲ್‌ನಲ್ಲಿ ಹೋಟೆಲ್, ರೆಸ್ಟೋರೆಂಟ್ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
Mangaluru: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಅನಿರೀಕ್ಷಿತ ದಾಳಿ ನಡೆಸಲಾಯಿತು.
ಮಂಗಳೂರು: ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಸೂಚನೆಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಅನಿರೀಕ್ಷಿತ ದಾಳಿ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಹೆಚ್ ಅವರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ, ಸುರತ್ಕಲ್ ವ್ಯಾಪ್ತಿಯ ವಿವಿಧ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸರಬರಾಜು ಕೇಂದ್ರಗಳನ್ನು ತಪಾಸಣೆ ಮಾಡಲಾಯಿತು.

ಸೂರಜ್ ಇಂಟರ್‌ನ್ಯಾಷನಲ್ ಹೋಟೆಲ್, ಮೋರ್ ರಿಟೇಲ್ ಮಳಿಗೆ, ಬ್ಲಿಂಕಿಟ್ ಆನ್‌ಲೈನ್ ಪ್ಲಾಟ್‌ಫಾರ್ಮ್, ಮೆಕ್‌ಡೊನಾಲ್ಡ್ಸ್ ರೆಸ್ಟೋರೆಂಟ್ ಹಾಗೂ ಎನ್‌ಐಟಿಕೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಆಹಾರ ಸರಬರಾಜು ಮಾಡುವ ಅಡುಗೆಮನೆಗಳ ಮೇಲೆ ದಾಳಿ ನಡೆಸಲಾಯಿತು.
ಸೂರಜ್ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳದಿರುವುದರಿಂದ ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಯಿತು. ಅದೇ ರೀತಿ, ಮೆಕ್‌ಡೊನಾಲ್ಡ್ಸ್ ರೆಸ್ಟೋರೆಂಟ್‌ನ ಅಡುಗೆಮನೆಯಲ್ಲಿಯೂ ಸ್ವಚ್ಛತೆಯ ಕೊರತೆ ಕಂಡುಬಂದ ಹಿನ್ನೆಲೆ, ಪ್ರಕರಣ ದಾಖಲಿಸಲಾಯಿತು.
ಸೂರಜ್ ಇಂಟರ್‌ನ್ಯಾಷನಲ್ ಹೋಟೆಲ್ ಮತ್ತು ಮೆಕ್‌ಡೊನಾಲ್ಡ್ಸ್ ರೆಸ್ಟೋರೆಂಟ್‌ಗಳಿಂದ ಆಹಾರ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಯಿತು.