ಮಾಜಿ ಸಚಿವ, ಬಿಜೆಪಿ ನಾಯಕ ರಾಮಚಂದ್ರ ಗೌಡ ಇನ್ನಿಲ್ಲ

Former Minister And BJP Leader Ramachandra Gowda Passed Away: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು, ಇಂದು (ಮಂಗಳವಾರ) ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Jul 14, 2026 - 09:21
Jul 14, 2026 - 09:22
ಮಾಜಿ ಸಚಿವ, ಬಿಜೆಪಿ ನಾಯಕ ರಾಮಚಂದ್ರ ಗೌಡ ಇನ್ನಿಲ್ಲ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು, ಇಂದು (ಮಂಗಳವಾರ) ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 
 
ತೀವ್ರ ಅನಾರೋಗ್ಯ ಹಾಗೂ ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೂ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. 
 
ಬಸವೇಶ್ವರ ನಗರದ ಅವರ ಮನೆ ಸಮೀಪ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. 
 
ಕರ್ನಾಟಕದಲ್ಲಿ 'ಬಿಜೆಪಿ' ಕಟ್ಟುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು. ಆರ್‌ಎಸ್‌ಎಸ್‌ ಹಿನ್ನೆಲೆಯಲ್ಲಿ ಬಂದಿದ್ದ ಅವರು, 1970ರಲ್ಲಿ ರಾಜ್ಯ ರಾಜಕಾರಣವನ್ನು ಪ್ರವೇಶಿಸಿದ್ದರು. ಸತತ 5 ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. 
 
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2018ರಲ್ಲಿ ವಯೋಸಹಜ ಕಾರಣಗಳಿಂದಾಗಿ, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.