ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ನಾಳೆ ಅಂತ್ಯಕ್ರಿಯೆ
Former PM H.D.DeveGowda’s Wife Chennamma Passes Away: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಶನಿವಾರ ನಿಧನರಾಗಿದ್ದಾರೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ.
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಶನಿವಾರ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಜುಲೈ 15 ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತಜ್ಞ ವೈದ್ಯ ಡಾ.ಸತ್ಯನಾರಾಯಣ ಚಿಕಿತ್ಸೆ ನೀಡುತ್ತಿದ್ದರು.
ಹೊಳೆನರಸೀಪುರದ ಹೆಚ್.ಡಿ.ರೇವಣ್ಣರ ಮನೆಯಲ್ಲಿ ಇಂದು ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾವಿನಕೆರೆ ಶ್ರೀರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಮಧ್ಯಾಹ್ನ 2 ಗಂಟೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
ಸದ್ಯ, ಬೆಂಗಳೂರಿನಿಂದ ಅಂತಿಮ ಯಾತ್ರೆ ಶುರುವಾಗಿದೆ. ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಬೆಳ್ಳೂರು ಕ್ರಾಸ್, ಕುಣಿಗಲ್ ಕ್ರಾಸ್, ಹಿರಿಸಾವೆ ಕ್ರಾಸ್, ಚನ್ನರಾಯಪಟ್ಟಣ, ಹಾಸನ ಡೈರಿ ಸರ್ಕಲ್, ಶಾಂತಿಗ್ರಾಮ ಹಾಗೂ ಮೋಸಳೆ ಹೊಸಹಳ್ಳಿ ಮಾರ್ಗವಾಗಿ ಸಾಗಲಿದೆ.

ಸಕಲ ಸರ್ಕಾರಿ ಗೌರವದೊಂದಿಗೆ ಚೆನ್ನಮ್ಮರ ಅಂತ್ಯಸಂಸ್ಕಾರ ನೆರವೇರಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ:
ಚೆನ್ನಮ್ಮ ಅವರ ನಿಧನದ ಹಿನ್ನೆಲೆ, ಹಾಸನದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಜೊತೆಗೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.