ಗದಗ, ಮಂಗಳೂರಿನ ಸರ್ಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್​​ ಬೆದರಿಕೆ

ಮಂಗಳೂರಿನ ಆರ್‌ಟಿಒ ಕಚೇರಿಗೂ ಇ-ಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಮಂಗಳೂರಿನ ನೆಹರು ಮೈದಾನದ ಬಳಿಯ ಆರ್‌ಟಿಒ ಕಚೇರಿಗೆ 5 ಕಡೆ ಬಾಂಬ್‌ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಮೇಲ್​​ ರವಾನಿಸಲಾಗಿದೆ.

Dec 15, 2025 - 17:13
ಗದಗ, ಮಂಗಳೂರಿನ ಸರ್ಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್​​ ಬೆದರಿಕೆ

ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಡಿಸಿ ಕಚೇರಿಗೆ ಬಾಂಬ್​​ ಬೆದರಿಕೆ ಹಾಕಲಾಗಿದೆ. ಪಾಕ್​ನ ಐಎಸ್​​ಐ ಮತ್ತು ಎಲ್​​​ಟಿಟಿಇ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್​ಗಳಿಂದ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಧಮ್ಕಿ ಹಾಕಿದ್ದಾರೆ. ಸದ್ಯ ಗದಗ ಜಿಲ್ಲಾಡಳಿತ ಭವನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಶ್ವಾನದಳ, ಬಾಂಬ್ ಪತ್ತೆದಳ ಸಿಬ್ಬಂದಿ ಇಂಚಿಂಚು ತಪಾಸಣೆ ಮಾಡಿದ್ದಾರೆ.
ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಬಾಂಬ್​​ ಬೆದರಿಕೆ ಹಾಕಲಾಗಿದೆ. ನಿಮ್ಮ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐದು ಬಾಂಬ್​​ಗಳನ್ನು ಶೀಘ್ರದಲ್ಲೇ ಸ್ಫೋಟಿಸಲಾಗುವುದು. ಪಾಕಿಸ್ತಾನ-ತಮಿಳುನಾಡು ಡಿಎಂಕೆ 2026ರ ಚುನಾವಣೆಗೆ ಗಮನವನ್ನು ಬೇರೆಡೆ ಸೆಳೆಯಲು ಬಯಸುತ್ತಿದೆ ಎಂದು ಉಲ್ಲೇಖಿಸಲಾಗಿದೆ.​​ ಸದ್ಯ ಡಿವೈಎಸ್​ಪಿ ಮುರ್ತುಜಾ ಖಾಜಿ, ಸಿಪಿಐ ಲಾಲಸಾಬ್ ಜೂಲಕಟ್ಟಿ, ಸಿದ್ದರಾಮೇಶ್​​, ಪಿಎಸ್ಐ ವ್ಹಿಜಿ ಪವಾರ ಸೇರಿದಂತೆ ಅಧಿಕಾರಿಗಳಿಂದ ಪರಿಶೀಲನೆ ಮಾಡಲಾಗಿದೆ.

ಅದೇ ರೀತಿಯಾಗಿ ಮಂಗಳೂರಿನ ಆರ್‌ಟಿಒ ಕಚೇರಿಗೂ ಇ-ಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಮಂಗಳೂರಿನ ನೆಹರು ಮೈದಾನದ ಬಳಿಯ ಆರ್‌ಟಿಒ ಕಚೇರಿಗೆ 5 ಕಡೆ ಬಾಂಬ್‌ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಮೇಲ್​​ ರವಾನಿಸಲಾಗಿದೆ. ಸದ್ಯ ಆರ್‌ಟಿಒ ಕಚೇರಿಗೆ ಮಂಗಳೂರು ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಕಟ್ಟಡವನ್ನು ತಪಾಸಣೆ ಮಾಡಲಾಗಿದೆ.

ಇನ್ನು ಇತ್ತೀಚೆಗೆ ಬೀದರ್​​ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿದ್ದೇವೆ ಅದನ್ನ ಆದಷ್ಟು ಬೇಗ ಬ್ಲಾಸ್ಟ್ ಮಾಡಲಾಗುವುದು ಎಂದು ಬೀದರ್ ಜಿಲ್ಲಾಧಿಕಾರಿ ಕಚೇರಿ ಮೇಲ್ ಐಡಿಗೆ ಅಪರಿಚಿತರ ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.