ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕು ರಕ್ಷಣೆ ಮಾಡಬೇಕು.

May 13, 2026 - 20:57
May 13, 2026 - 22:26
ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 13: "ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, "ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕು ರಕ್ಷಣೆ ಮಾಡಬೇಕು. 'ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ, ವಿದೇಶ ಪ್ರಯಾಣ ಬೇಡ' ಎಂದು ಹೇಳುವ ಕಷ್ಟ ಕಾಲದಲ್ಲಿ ಜನರಿಗೆ ಒಳ್ಳೆಯದಾಗಬೇಕು" ಎಂದು ತಿಳಿಸಿದರು.

ದೇಶಕ್ಕೆ ದೊಡ್ಡ ಅಪಮಾನ

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್ ಪರೀಕ್ಷೆ ರದ್ದಾಗಿರುವ ಬಗ್ಗೆ ಕೇಳಿದಾಗ, "ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ದೊಡ್ಡ ಅಪಮಾನವಾಗಿದ್ದು, ಕೇಂದ್ರ ಸಚಿವರು ಹಾಗೂ ಸಂಸದರು ಇದಕ್ಕೆ ಉತ್ತರಿಸಬೇಕು. ಇದೇ ಪ್ರಕರಣ ನಮ್ಮ ರಾಜ್ಯದಲ್ಲಿ ಆಗಿದ್ದರೆ ಇಷ್ಟು ಹೊತ್ತಿಗೆ ನಮ್ಮ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ಅನೇಕ ಕನಸು ಕಟ್ಟಿಕೊಂಡು ಕಷ್ಟಪಟ್ಟಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶಗೊಂಡಿದ್ದಾರೆ" ಎಂದು ತಿಳಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.