ಜಿಬಿಎ: ಆಗಸ್ಟ್ 1 ರಿಂದ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನ
Greater Bengaluru Authority (GBA): ರಾಜಧಾನಿಯನ್ನು ಸ್ವಚ್ಛ ನಗರ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪಣ ತೊಟ್ಟಿದೆ. ಖಾಲಿ ನಿವೇಶನಗಳಲ್ಲಿ ಕಸ ಹಾಕುವುದನ್ನು ತಡೆಗಟ್ಟುವ ಸಲುವಾಗಿ ಆಗಸ್ಟ್ 1 ರಿಂದ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನ ಕೈಗೊಂಡಿದೆ.
ಬೆಂಗಳೂರು: ರಾಜಧಾನಿಯನ್ನು ಸ್ವಚ್ಛ ನಗರ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪಣ ತೊಟ್ಟಿದೆ. ಖಾಲಿ ನಿವೇಶನಗಳಲ್ಲಿ ಕಸ ಹಾಕುವುದನ್ನು ತಡೆಗಟ್ಟುವ ಸಲುವಾಗಿ ಆಗಸ್ಟ್ 1 ರಿಂದ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನ ಕೈಗೊಂಡಿದೆ.
ಖಾಲಿ ನಿವೇಶನಗಳಲ್ಲಿ ಕಸ, ಗಿಡ-ಗಂಟೆಗಳು ಹಾಗೂ ಕಟ್ಟಡ ತ್ಯಾಜ್ಯ ತುಂಬಿ, ರಾಜಧಾನಿಯ ಸೌಂದರ್ಯ ಹಾಳಾಗುತ್ತಿದೆ. ಜೊತೆಗೆ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಜನ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೀಗಾಗಿ, ಈ ಕ್ರಮಕ್ಕೆ ಜಿಬಿಎ ಮುಂದಾಗಿದೆ.
ಆಗಸ್ಟ್ 15 ರೊಳಗೆ ನಿವೇಶನಗಳಲ್ಲಿರುವ ತ್ಯಾಜ್ಯವನ್ನು ತೆಗೆಯದಿದ್ದರೆ, ರೂ.25,000 ರಿಂದ ರೂ.1 ಲಕ್ಷವರೆಗೆ ದಂಡ ವಿಧಿಸುವುದಾಗಿ ಎಚ್ಚರಿಸಿದ್ದಾರೆ.
ಆ ಬಳಿಕವು ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಕಂಡುಬಂದರೆ, ಸಾರ್ವಜನಿಕರು ಅದರ ಫೋಟೋ ಹಾಗೂ ಸ್ಥಳದ ವಿವರಗಳಿಗೆ ಸಂಬಂಧಿಸಿದ ಮಾಹಿತಿಯನ್ನು 9448197197 ವಾಟ್ಸಾಪ್ ಸಂಖ್ಯೆ ಕಳುಹಿಸಬಹುದು. ದೂರುದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.