Today Gold Price: ಇಂದು ಚಿನ್ನ - ಬೆಳ್ಳಿ ದರ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನ ಹಾಗೂ ಬೆಳ್ಳಿ ದರಗಳು ಹೆಚ್ಚಳಗೊಂಡಿದೆ.

Oct 10, 2026 - 10:37
Today Gold Price: ಇಂದು ಚಿನ್ನ - ಬೆಳ್ಳಿ ದರ ಏರಿಕೆ

Today Gold Price: ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಆದರೀಗ, ಸದ್ದಿಲ್ಲದೇ ಆಭರಣದ ಬೆಲೆಗಳು ಏರಿಕೆಯಾಗಿವೆ. ಇದರಿಂದ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. 

ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನ ಹಾಗೂ ಬೆಳ್ಳಿ ದರಗಳು ಹೆಚ್ಚಳಗೊಂಡಿದೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.710 ಅಧಿಕವಾಗಿ ರೂ.1,51,420 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.650 ಏರಿಕೆಯಾಗಿ ರೂ.1,38,800ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.540 ಹೆಚ್ಚಳವಾಗಿ ರೂ.1,13,570 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,100 ಅಧಿಕವಾಗಿ ರೂ.2,40,000 ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದೆ. 10 ಗ್ರಾಂ ಪ್ಲಾಟಿನಂ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೇ ರೂ.51,960 ಬೆಲೆಯಲ್ಲಿ ಮಾರಾಟವಾಗುತ್ತಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.