Today Gold Price: ಇಂದು ಚಿನ್ನ - ಬೆಳ್ಳಿ ದರ ಸ್ಥಿರ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ರೂ.1,47,440 ಇದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ರೂ.1,350,150ಕ್ಕೆ ಬಂದಿದೆ. 18 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ರೂ.1,10,580 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,30,000 ದರದಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ.
ಷೇರುಪೇಟೆ: ಸಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್ಇ ಸೆನ್ಸೆಕ್ಸ್ 25.47 ಅಂಕಗಳು ಏರಿಕೆಯಾಗಿ 74,341.08 ಅಂಕಗಳಿಗೆ ತಲುಪಿದೆ. ನಿಫ್ಟಿ 67.75 ಅಂಕಗಳು ಹೆಚ್ಚಳವಾಗಿ 23,065.10 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಟೆಕ್ ಮಹೀಂದ್ರಾ, ಇನ್ಫೋಸಿಸ್, ಟಿಸಿಎಸ್, ಭಾರತಿ ಏರ್ಟೆಲ್ ಮತ್ತು ಟೈಟಾನ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ರಿಲಯನ್ಸ್, ಬಜಾಜ್ ಫಿನ್ಸರ್ವ್, ಎಲ್&ಟಿ, ಕೋಟಕ್ ಬ್ಯಾಂಕ್ ಹಾಗೂ ಹಿಂದೂಸ್ತಾನ್ ಯೂನಿಲಿವರ್ ಷೇರುಗಳು ನಷ್ಟದಲ್ಲಿವೆ.