Today Gold Price: ಇಂದು ಚಿನ್ನ - ಬೆಳ್ಳಿ ದರ ಸ್ಥಿರ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಯು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

Oct 21, 2026 - 10:08
Today Gold Price: ಇಂದು ಚಿನ್ನ - ಬೆಳ್ಳಿ ದರ ಸ್ಥಿರ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಯು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
 
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,47,170 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,34,900ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,10,380 ಆಗಿದೆ. 
 
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,30,000 ದರದಲ್ಲಿ ಗ್ರಾಹಕರ ಖರೀದಿಗೆ ಸಿಗಲಿದೆ. 
 
ಷೇರುಪೇಟೆ: ಸಕಾರತ್ಮಕ ವಹಿವಾಟು
 
ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 25.47 ಅಂಕಗಳು ಏರಿಕೆಯಾಗಿ 74,341.08 ಅಂಕಗಳಲ್ಲಿ ತಲುಪಿದೆ. ನಿಫ್ಟಿ 127.05 ಅಂಕಗಳು ಹೆಚ್ಚಳವಾಗಿ 23,016 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 
 
ಇನ್ಫೋಸಿಸ್, ಅಲ್ಟ್ರಾಟೆಕ್ ಸಿಮೆಂಟ್, ಐಸಿಐಸಿಐ ಬ್ಯಾಂಕ್, ಎಚ್‌ಸಿಎಲ್ ಟೆಕ್ ಹಾಗೂ ಪವರ್ ಗ್ರಿಡ್‌ ಕಂಪನಿ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಇಂಡಿಗೋ, ಟ್ರೆಂಟ್, ಬಜಾಜ್ ಫಿನ್‌ಸರ್ವ್, ಹಿಂದೂಸ್ತಾನ್ ಯೂನಿಲಿವರ್ ಮತ್ತು ಹೆಚ್‌ಡಿಎಫ್‌ಸಿ ಬ್ಯಾಂಕ್‌ ಷೇರುಗಳು ನಷ್ಟದಲ್ಲಿವೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.