Today Gold Price: ಆಭರಣ ಪ್ರಿಯರಿಗೆ ಸಿಹಿಸುದ್ದಿ.. ಚಿನ್ನ - ಬೆಳ್ಳಿ ಬೆಲೆ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಇಳಿಕೆಯಾಗಿವೆ.

Oct 23, 2026 - 11:00
Today Gold Price: ಆಭರಣ ಪ್ರಿಯರಿಗೆ ಸಿಹಿಸುದ್ದಿ.. ಚಿನ್ನ - ಬೆಳ್ಳಿ ಬೆಲೆ ಇಳಿಕೆ

Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಇಳಿಕೆಯಾಗಿವೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,900 ಇಳಿಕೆಯಾಗಿ ರೂ.1,42,480 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,750 ಕಡಿಮೆಯಾಗಿ ರೂ.1,30,600ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,430 ಇಳಿಕೆಯಾಗಿ ರೂ.1,06,860 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಕಡಿಮೆಯಾಗಿ ರೂ.2,20,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 10 ಗ್ರಾಂ ಪ್ಲಾಟಿನಂ ಬೆಲೆಯೂ ರೂ.430 ಇಳಿಕೆಯಾಗಿ ರೂ.47,570 ಇದೆ.

ಷೇರುಪೇಟೆ: ಸಕಾರತ್ಮಕ ವಹಿವಾಟು:

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 416.25 ಅಂಕಗಳು ಏರಿಕೆಯಾಗಿ 73,665.64 ಅಂಕಗಳಿಗೆ ಬಂದಿದೆ. ನಿಫ್ಟಿ 54.55 ಅಂಕಗಳು ಹೆಚ್ಚಳವಾಗಿ 22,742.20 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ, ಎಲ್‌&ಟಿ, ಹೆಚ್‌ಸಿಎಲ್ ಟೆಕ್ ಹಾಗೂ ಐಸಿಐಸಿಐ ಬ್ಯಾಂಕ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಟಾಟಾ ಸ್ಟೀಲ್, ಟೈಟಾನ್, ಇಂಡಿಗೋ, ಏಷ್ಯನ್ ಪೇಂಟ್ಸ್ ಮತ್ತು ಬಜಾಜ್ ಫಿನ್‌ಸರ್ವ್ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.