Today Gold Price: ಚಿನ್ನದ ದರ ಮತ್ತೆ ಅತ್ಯಲ್ಪ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

Oct 28, 2026 - 11:48
Today Gold Price: ಚಿನ್ನದ ದರ ಮತ್ತೆ ಅತ್ಯಲ್ಪ ಏರಿಕೆ

Today Gold Price: ಆಭರಣ ಪ್ರಿಯರ ಜೇಬಿಗೆ ಕತ್ತರಿ ಬಿದ್ದಿದೆ. ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.660 ಹೆಚ್ಚಳವಾಗಿ ರೂ.1,43,950 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.600 ಏರಿಕೆಯಾಗಿ ರೂ.1,31,950ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.390 ಹೆಚ್ಚಳವಾಗಿ ರೂ.1,07,960 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,20,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಷೇರುಪೇಟೆ: ನಕಾರತ್ಮಕ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 345.23 ಅಂಕಗಳು ಕುಸಿದು 73,253.44 ಅಂಕಗಳಿಗೆ ತಲುಪಿದೆ. ನಿಫ್ಟಿ 71.75 ಅಂಕಗಳು ಇಳಿದು 22,708.80 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಎಲ್&ಟಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಆಕ್ಸಿಸ್ ಬ್ಯಾಂಕ್, ಮಾರುತಿ ಮತ್ತು ಪವರ್ ಗ್ರಿಡ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ ಇನ್ಫೋಸಿಸ್, ಟೆಕ್ ಮಹೀಂದ್ರಾ, ಹೆಚ್‌ಸಿಎಲ್ ಟೆಕ್, ಟಿಸಿಎಸ್ ಹಾಗೂ ಐಟಿಸಿ ಷೇರುಗಳು ನಷ್ಟದಲ್ಲಿವೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.